ಪಿ.ಎಂ ಉದ್ಯೋಗ ಸೃಜನಾ ಯೋಜನೆಯಡಿ 40.18 ಕೋಟಿ ರೂ. ಸಾಲ ವಿತರಣೆ: ಸ್ವ-ನಿಧಿ ಯೋಜನೆಯಲ್ಲಿ ಉಡುಪಿಗೆ ರಾಜ್ಯದಲ್ಲೇ ಪ್ರಥಮ ಸ್ಥಾನ

ಉಡುಪಿ: ಪ್ರಧಾನಮಂತ್ರಿ ಉದ್ಯೋಗ ಸೃಜನಾ ಯೋಜನೆಯಡಿ ಜಿಲ್ಲೆಯ ಉದ್ಯಮಿಗಳನ್ನು ಬೆಂಬಲಿಸುವುದರೊಂದಿಗೆ ಉದ್ಯೋಗಾವಕಾಶ ಸೃಷ್ಠಿಸಲು 173 ಫಲಾನುಭವಿಗಳಿಗೆ 40.18 ಕೋಟಿ ರೂ. ಸಾಲ ವಿತರಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಹೇಳಿದರು. ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ ನಡೆದ ಜಿಲ್ಲಾ ಲೀಡ್ ಬ್ಯಾಂಕ್ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಇನ್ನುಳಿದ ಅರ್ಜಿಗಳನ್ನು ಆದ್ಯತೆಯ ಮೇಲೆ ವಿಲೇವಾರಿ ಮಾಡಿ, ಅರ್ಹ ಫಲಾನುಭವಿ ಉದ್ಯಮಿಗಳಿಗೆ ಸಬ್ಸಿಡಿಯನ್ನು ಶೀಘ್ರವಾಗಿ ವಿತರಿಸುವಂತೆ ಸೂಚನೆ […]