ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆಯಡಿ ಸ್ವ-ಉದ್ಯೋಗ ಆರಂಭಿಸಲು ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನ

ಉಡುಪಿ: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿಎಂಇಜಿಪಿ) ಯಡಿ ಜಿಲ್ಲೆಯಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತಿ ಹೊಂದಿರುವ 18 ವರ್ಷ ಮೇಲ್ಪಟ್ಟ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಗರಿಷ್ಠ ಯೋಜನಾ ವೆಚ್ಚ ರೂ. 50.00 ಲಕ್ಷ ಮೊತ್ತದ ಹೊಸ ಕೈಗಾರಿಕೆ ಉತ್ಪಾದನೆ ಚಟುವಟಿಕೆ ಹಾಗೂ ಗರಿಷ್ಠ ಯೋಜನಾ ವೆಚ್ಚ ರೂ. 20.00 ಲಕ್ಷ ಮೊತ್ತದ ಆಯ್ದ ಕೆಲವು ಸೇವಾ ಘಟಕ ಸ್ಥಾಪಿಸಲು ಅವಕಾಶವಿದ್ದು, […]

ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ: ಯುವಕ ಯುವತಿಯರಿಂದ ಸ್ವ-ಉದ್ಯೋಗಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತ 18 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಂದ ವೆಬ್‌ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574855 […]

ಪಿಎಂಇಜಿಪಿ ಯೋಜನೆ ಅಡಿಯಲ್ಲಿ ವಂಚನೆ: ಸಾರ್ವಜನಿಕರಿಗೆ ಎಚ್ಚರಿಕೆ

ಉಡುಪಿ, ಜುಲೈ 18: ಉಡುಪಿ ಮತ್ತು ಇತರ ಜಿಲ್ಲೆಗಳಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ ಕಾರ್ಯಕ್ರಮ (ಪಿಎಂಇಜಿಪಿ) ಅಡಿಯಲ್ಲಿ ಸಾಲ ಮತ್ತು ಸಬ್ಸಿಡಿ ಮಂಜೂರು ಮಾಡುವುದಾಗಿ ಕೆಲವೊಂದು ಸಂಸ್ಥೆಗಳು ಭರವಸೆ ನೀಡಿ, ಸಾರ್ವಜನಿಕರಿಗೆ ವಂಚಿಸುತ್ತಿರುವುದು ಕಚೇರಿಯ ಗಮನಕ್ಕೆ ಬಂದಿದೆ. ತಮ್ಮ ವೈಯುಕ್ತಿಕ ಲಾಭಕ್ಕಾಗಿ ಮೋಸ ಮಾಡಲು ಪ್ರಯತ್ನಿಸುತ್ತಿರುವ ಇಂತಹ ಮೋಸದ ಅಂಶಗಳಿಗೆ ಉದ್ಯಮಿಗಳು ಬಲಿಯಾಗದಂತೆ ಪಿಎಂಇಜಿಪಿ ಯೋಜನೆಯ ರಾಜ್ಯ ಕಚೇರಿ, ಖಾದಿ ಮತ್ತು ಗ್ರಾಮಾಂತರ ಕೈಗಾರಿಕಾ ಆಯೋಗ, ಸಾರ್ವಜನಿಕರಿಗೆ ತಿಳಿಸಿದೆ. ಅಂತಹ ಯಾವುದೇ ವ್ಯಕ್ತಿಗಳು/ ಸಂಸ್ಥೆಗಳನ್ನು […]