ಪ್ರಧಾನಿ ಮೋದಿ ಬಯೋಪಿಕ್ ರಿಲೀಸ್ ಗೆ ದಿನಾಂಕ ಫಿಕ್ಸ್..

ನವದೆಹಲಿ: ಬಹು ನಿರೀಕ್ಷೆಯ ಮೋದಿ ಬಯೋಪಿಕ್ ರಿಲೀಸ್ ಗೆ ಕಾಲ ಕೂಡಿ ಬಂದಿದೆ. ಟ್ರೈಲರ್ ಮೂಲಕ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ಮೋದಿ ಸಿನಿಮಾ ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ತೆರೆಗೆ ಬರುತ್ತಿದೆ. ಬಾಲಿವುಡ್ ನಟ ವಿವೇಕ್ ಓಬೆರಾಯ್ ಪ್ರಧಾನಿ ನರೇಂದ್ರ ಮೋದಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಇಡೀ ದೇಶವೆ ಕಾತುರದಿಂದ ಕಾಯುತ್ತಿರುವ ಲೋಕ ಸಭಾ ಚುನಾವಣೆಯ ಫಲಿತಾಂಶ ಮೇ 23ಕ್ಕೆ ಹೊರಬೀಳಿದ್ದು, ಅದರ ಮರುದಿನವೆ ಮೇ 24ಕ್ಕೆ ಮೋದಿ ಬಯೋಪಿಕ್ ತೆರೆಗೆ ಬರುತ್ತಿದೆ. ಈ ಬಗ್ಗೆ ಚಿತ್ರತಂಡವೆ […]
‘ಪಿಎಂ ನರೇಂದ್ರ ಮೋದಿ’ ಸಿನೆಮಾ ಬಿಡುಗಡೆಗೆ ಚುನಾವಣಾ ಆಯೋಗ ತಡೆ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಜೀವನಚರಿತ್ರೆಯನ್ನು ಆಧರಿಸಿದ ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್ (ಸಿನೆಮಾ) ಬಿಡುಗಡೆಗೆ ಚುನಾವಣಾ ಆಯೋಗವು ಬುಧವಾರ ತಡೆ ನೀಡಿದೆ. ಹಾಗೆಯೇ ‘ನಮೋ ಟಿವಿ’ಯ ಪ್ರಸಾರಕ್ಕೂ ಲೋಕಸಭೆ ಚುನಾವಣೆ ಮುಗಿಯುವವರೆಗೆ ನಿರ್ಬಂಧ ಹೇರಲಾಗಿದೆ. ‘ನಮೋ ಟಿ.ವಿ’ಯಲ್ಲಿ ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳನ್ನು ಪ್ರಸಾರ ಮಾಡಲಾಗುತ್ತಿತ್ತು ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ‘ಪಿಎಂ ನರೇಂದ್ರ ಮೋದಿ’ ಬಯೋಪಿಕ್ ಏಪ್ರಿಲ್ 11ರಂದು ಬಿಡುಗಡೆಯಾಗಬೇಕಿತ್ತು. ಲೋಕಸಭೆಯ ಮೊದಲ ಹಂತದ ಮತದಾನವೂ ಅಂದೇ ನಡೆಯಲಿದೆ. ಆದರೆ ಅದಕ್ಕೂ ಒಂದು ದಿನ […]