ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಜಿಲ್ಲೆಗೆ 1 ಕೋಟಿ 15 ಲಕ್ಷಕ್ಕೂ ಅಧಿಕ ಮೊತ್ತ ಮಂಜೂರು
ಉಡುಪಿ: ಜನವರಿ 2020 ರಿಂದ ಡಿಸೆಂಬರ್ 2022 ರ ತನಕ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿ(PMNRF) ಯಿಂದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಗೆ ಮಾನ್ಯ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಶಿಫಾರಸ್ಸಿನ ಮೇರೆಗೆ ಸುಮಾರು ರೂಪಾಯಿ 1,15,60,000(ಒಂದು ಕೋಟಿ ಹದಿನೈದು ಲಕ್ಷದ ಅರ್ವತ್ತು ಸಾವಿರ ರೂಪಾಯಿ)ಮೊತ್ತವನ್ನು ರೋಗಿಗಳ ಚಿಕಿತ್ಸೆಗೆ ಮಂಜೂರು ಮಾಡಲಾಗಿದೆ ಎಂದು ಸಂಸದರ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.
ಗುಜರಾತಿನಲ್ಲಿ ತೂಗು ಸೇತುವೆ ದುರಂತ: 130 ಕ್ಕೂ ಹೆಚ್ಚು ಜನರ ಸಾವು, ಪರಿಹಾರ ಘೋಷಿಸಿದ ಪ್ರಧಾನಿ
ಅಹಮದಾಬಾದ್: ಭಾನುವಾರ ಸಂಜೆ ಗುಜರಾತ್‌ನ ಮೊರ್ಬಿಯಲ್ಲಿ ತೂಗು ಸೇತುವೆ ಕುಸಿದು 130 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ. ಇದು ಸುದ್ದಿಯು ದೇಶಾದ್ಯಂತ ತಲ್ಲಣವನ್ನು ಸೃಷ್ಟಿಸಿದೆ. ಸಶಸ್ತ್ರ ಪಡೆಗಳ ಸಿಬ್ಬಂದಿ ಮತ್ತು ಎನ್‌ಡಿಆರ್‌ಎಫ್ ಸೇರಿದಂತೆ ರಕ್ಷಣಾ ತಂಡಗಳು ಘಟನೆಯ ನಡೆದ ತಕ್ಷಣವೇ ಸ್ಥಳಕ್ಕೆ ಧಾವಿಸಿದೆ ಮತ್ತು ಸುಮಾರು ಇನ್ನೂರು ಜನರ ತಂಡವು ರಾತಿಯಿಡೀ ಕಾರ್ಯಾಚರಣೆಯನ್ನು ಮುಂದುವರಿಸಿದೆ. ಸುದ್ದಿ ಸಂಸ್ಥೆ ಎಎನ್‌ಐ ಪ್ರಕಾರ ಇದುವರೆಗೆ 150 ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಭಾನುವಾರ […]