ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರ ದಾಳಿ: ಮೂವರ ಬಂಧನ

ಬೆಳ್ತಂಗಡಿ: ಇಲ್ಲಿನ ಕಲ್ಲಗುಡ್ಡೆ ಎಂಬಲ್ಲಿ ಬಾಡಿಗೆ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದು, ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರನ್ನು ಜನಾರ್ದನ ಪೂಜಾರಿ(45) ಜನಾರ್ದನ ಇಳಂತಿಲ  (40) ಮತ್ತು ರಾಮಚಂದ್ರ ದೇವಾಡಿಗ (45) ಎಂದು ಗುರುತಿಸಲಾಗಿದೆ. ದಾಳಿ ವೇಳೆ ಇಬ್ಬರು ಯುವತಿಯನ್ನು ರಕ್ಷಣೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ರಾಮಚಂದ್ರ ದೇವಾಡಿಗ ಬಾಡಿಗೆ ಮನೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಎನ್ನಲಾಗಿದೆ. ಈ ಬಗ್ಗೆ ಖಚಿತ ಮಾಹಿತಿ ಪಡೆದ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ […]