ಸುಳ್ಳು ಕೇಸ್ ಆಧರಿಸಿ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತ ಮೇಲೆ ಪೊಲೀಸರ ದೌರ್ಜನ್ಯ: ಸಿದ್ದರಾಮಯ್ಯ
ಬೆಂಗಳೂರು: ಕಾರ್ಕಳದ ಕಾಂಗ್ರೆಸ್ ಕಾರ್ಯಕರ್ತ ರಾಧಾಕೃಷ್ಣ ನಾಯಕ್ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಖಂಡನೀಯ. ಅವರ ಅನಾರೋಗ್ಯವನ್ನೂ ಲೆಕ್ಕಿಸದೆ, ಹಳೆಯ ಸುಳ್ಳು ಕೇಸ್ ಆಧರಿಸಿ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ. ಈ ಬಗ್ಗೆ ಉಡುಪಿ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ನಡೆಸಿ ನೊಂದ ಯುವಕನಿಗೆ ನ್ಯಾಯ ಒದಗಿಸಬೇಕು ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟ್ವಿಟರ್ ನಲ್ಲಿ ಆಗ್ರಹಿಸಿದ್ದಾರೆ.