ಬೆಂಗಳೂರಿನಲ್ಲಿ ವಾಹನ ಅಡ್ಡಗಟ್ಟಿ 7 ಕೋಟಿ ರೂ. ದರೋಡೆ ಪ್ರಕರಣ: ಪೊಲೀಸ್ ಕಾನ್ಸ್‌ಟೇಬಲ್ ಬಂಧನ

ಬೆಂಗಳೂರು: ಬೆಂಗಳೂರಿನಲ್ಲಿ ಎರಡು ದಿನಗಳ ಹಿಂದೆ ಹಾಡುಹಗಲೇ ನಡೆದ 7 ಕೋಟಿ ರೂಪಾಯಿ ದರೋಡೆ ಪ್ರಕರಣ ಹಿಂದೆ ಪೊಲೀಸ್ ಕಾನ್ಸ್‌ಟೇಬಲ್ ಇದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ. ದರೋಡೆ ಪ್ರಕರಣ ಸಂಬಂಧ ಗೋವಿಂದಪುರ ಠಾಣೆಯ ಕಾನ್ಸ್‌ಟೇಬಲ್ ಅಣ್ಣಪ್ಪ ನಾಯ್ಕ್ ಎಂಬವರನ್ನು ದಕ್ಷಿಣ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಅಣ್ಣಪ್ಪ ನಾಯ್ಕ್ ಇಡೀ ದರೋಡೆಯ ಮಾಸ್ಟರ್‌ಮೈಂಡ್ ಎನ್ನಲಾಗುತ್ತಿದೆ. ಇವರೇ ಆರೋಪಿ ಗ್ಯಾಂಗ್ ನ್ನು ದರೋಡೆ ಹೇಗೆ ಮಾಡಬೇಕೆಂದು ಸಂಚು ರೂಪಿಸಿದ್ದರು ಎಂಬ ವಿಚಾರ ಪ್ರಾಥಮಿಕ ತನಿಖೆಯಲ್ಲಿ ಬಯಲಾಗಿದೆ. ಕಮ್ಮನಹಳ್ಳಿ, ಕಲ್ಯಾಣನಗರ ಹುಡುಗರ […]