ಗಂಗೊಳ್ಳಿ: ಜಿಲ್ಲಾಧಿಕಾರಿ ಆದೇಶ ಉಲ್ಲಂಘಿಸಿ ಬಾಡಿಗೆ ಮಾಡುತ್ತಿದ್ದ ಆಟೊಗಳ ವಶ

ಕುಂದಾಪುರ: ಕೊರೋನಾ ವೈರಸ್ ಹರಡದಂತೆ ಲಾಕ್‍ಡೌನ್ ಕಟ್ಟುನಿಟ್ಟಾಗಿ ಪಾಲಿಸಲು ಉಡುಪಿ ಜಿಲ್ಲೆಯಲ್ಲಿ ಆಟೋ ರಿಕ್ಷಾ ಸಂಚಾರವನ್ನು ಜಿಲ್ಲಾಧಿಕಾರಿಗಳು ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾಧಿಕಾರಿಗಳ ಆದೇಶ ಉಲ್ಲಂಘಿಸಿ ರಸ್ತೆಗಿಳಿದು ಬಾಡಿಗೆ ಮಾಡುತ್ತಿದ್ದ ಆಟೋ ರಿಕ್ಷಾಗಳನ್ನು ಸುಮಾರು 20 ಆಟೋ ರಿಕ್ಷಾಗಳನ್ನು ಗಂಗೊಳ್ಳಿ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಬುಧವಾರ ಗಂಗೊಳ್ಳಿಯಲ್ಲಿ ನಡೆದಿದೆ. ಕಳೆದ ಕೆಲವು ದಿನಗಳಿಂದ ಆಟೋ ರಿಕ್ಷಾಗಳು ಬಾಡಿಗೆಯಲ್ಲಿ ತೊಡಗಿಕೊಂಡಿದ್ದು, ದಿನದಿಂದ ದಿನಕ್ಕೆ ಆಟೋ ರಿಕ್ಷಾ ಸಂಚಾರ ಹೆಚ್ಚಾಗುತ್ತಿತ್ತು. ಜಿಲ್ಲಾಡಳಿತ ಮತ್ತು ಪೊಲೀಸರ ಕಟ್ಟುನಿಟ್ಟಿನ ಆದೇಶದ ಹೊರತಾಗಿಯೂ […]