ಕೋಟ: ಸಮಾಜ ಕಲ್ಯಾಣ ಇಲಾಖೆ ಸಚಿವರ ಊರಲ್ಲೇ ಪೊಲೀಸರ ಅಮಾನವೀಯ ಕೃತ್ಯ
ಕೋಟ: ಕೋಟತಟ್ಟು ಗ್ರಾಮದ ಬಾರಿಕೆರೆ ಎಂಬಲ್ಲಿ ಕೊರಗ ಸಮುದಾಯದ ಮನೆಯಲ್ಲಿ ಸೋಮವಾರ ನಡೆಯುತ್ತಿದ್ದ ಮೆಹಂದಿ ಕಾರ್ಯಕ್ರಮಕ್ಕೆ ಏಕಾಏಕಿ ನುಗ್ಗಿದ ಪೊಲೀಸರು ಮನೆಮಂದಿಗೆ ಲಾಠಿ ಚಾರ್ಜ್ ನಡೆಸಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿಬಂದಿದೆ. ದಿಢೀರ್ ಆಗಿ ಮದುವೆ ಮನೆಗೆ ನುಗ್ಗಿದ ಕೋಟ ಪೊಲೀಸರು, ಡಿಜೆ ಹಾಗೂ ಲೈಟ್ ಆಫ್ ಮಾಡಿಸಿದ್ದಾರೆ. ಬಳಿಕ ಮದುಮಗ, ಹೆಣ್ಣುಮಕ್ಕಳೆಂದು ಲೆಕ್ಕಿಸದೇ ಲಾಠಿ ಬೀಸಿದ್ದಾರೆ ಎಂದು ಮನೆಯವರು ಆರೋಪಿದ್ದಾರೆ. ಲಾಠಿ ಚಾರ್ಜ್ ನಿಂದ ಮದುಮಗ, ಮಹಿಳೆಯರು ಸೇರಿದಂತೆ 9 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ […]