ಪೊಲೀಸರಿಗೆ ಸೈನಿಕರಂತೆ ಗೌರವ ನೀಡಬೇಕು: ನ್ಯಾ. ಶಾಂತವೀರ ಶಿವಪ್ಪ

ಉಡುಪಿ: ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡಲು ತಮ್ಮ ಜೀವವನ್ನೇ ಪಣಕ್ಕಿಟ್ಟು ಹಗಲಿರುಳು ಶ್ರಮಿಸುವ ಪೊಲೀಸರಿಗೆ, ದೇಶದ ಗಡಿಯ ರಕ್ಷಣೆಯಲ್ಲಿ ತೊಡಗಿರುವ ಸೈನಿಕರಿಗೆ ನೀಡುವಷ್ಟು ಗೌರವ ಮತ್ತು ಸೌಲಭ್ಯಗಳನ್ನು ನೀಡಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಶಾಂತವೀರ ಶಿವಪ್ಪ ಹೇಳಿದರು. ಅವರು ಇಂದು ಉಡುಪಿ ಜಿಲ್ಲಾ ಪೋಲೀಸ್ ವತಿಯಿಂದ, ಚಂದು ಮೈದಾನದಲ್ಲಿ ನಡೆದ ಪೊಲೀಸ್ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ, ಪೊಲೀಸ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು. ಪೊಲೀಸರು ದೇಶದೊಳಗೆ ಅಡಗಿರುವ ದ್ರೋಹಿಗಳನ್ನು ಪತ್ತೆ ಹಚ್ಚಿ, […]