ಕಲ್ಯಾ: ಮಾಲಕಿ ಮನೆಯಲ್ಲಿಲ್ಲದ ವೇಳೆ ಕಳ್ಳತನ; ಕೃತ್ಯವೆಸಗಿದ ಸ್ನೇಹಿತೆಯ ಬಂಧನ

ಉಡುಪಿ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕಂಗಿತ್ತುವಿನ ಉಷಾ ಜಗದೀಶ್ ಆಂಚನ್ ಎಂಬವರ ಮನೆಯಲ್ಲಿ ಡಿಸೆಂಬರ್ 3ರಂದು ಕಳವು ಪ್ರಕರಣ ನಡೆದಿದ್ದು, ಕಳ್ಳರು ಮನೆಯಲ್ಲಿದ್ದ 4.50 ಲಕ್ಷ ರೂ. ಮೌಲ್ಯದ ಸುಮಾರು 156 ಗ್ರಾಂ ತೂಕದ ಬಂಗಾರದ ಒಡವೆಗಳನ್ನು ಕಳವು ಮಾಡಿಕೊಂಡು ಹೋದ ಬಗ್ಗೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣವನ್ನು ಬೇಧಿಸಿರುವ ಪೊಲೀಸರು ಕಾರ್ಕಳದಲ್ಲಿ ನಡೆದ ಕಳ್ಳತನದ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಬಂಟ್ವಾಳ ಅರಂಬೋಡಿ ಕಾಂತರಬೆಟ್ಟು ನಿವಾಸಿ ಪ್ರಸಾದ್ (34) ಹಾಗು ಕಳ್ಳತನಕ್ಕೆ […]
ವರ್ಗಾವಣೆಗೊಂಡ ಚಿಕ್ಕಮಗಳೂರು ಪೊಲೀಸ್ ಅಧೀಕ್ಷಕಿ ಶೃತಿ ಬೀಳ್ಕೊಡಿಗೆ

ಚಿಕ್ಕಮಗಳೂರು: ಪೊಲೀಸ್ ಇಲಾಖೆಯಲ್ಲಿ ದಕ್ಷ ಹಾಗೂ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸಿದ ಹೆಚ್ಚುವರಿ ಪೊಲೀಸ್ ಅಧೀಕ್ಷಕಿ ಎನ್.ಎಸ್.ಶೃತಿ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ವಿವಿಧ ಪಕ್ಷದ ಮುಖಂಡರು ಹಾಜರಿದ್ದರು. ಗೌರವ ಸ್ವೀಕರಿಸಿ ಮಾತನಾಡಿದ ಶೃತಿ, ಜಿಲ್ಲೆಯು ಶಾಂತಿಪ್ರಿಯವಾಗಿದ್ದು ಇಲ್ಲಿ ಸುಮಾರು ಮೂರು ವರ್ಷಕ್ಕೂ ಹೆಚ್ಚಿನ ಅವಧಿಯಿಂದ ಕರ್ತವ್ಯ ನಿರ್ವಹಿಸುತ್ತಿರುವುದು ಖುಷಿ ತಂದಿದೆ. ಹಿಂದೂ-ಮುಸ್ಲಿಂ ಸಮುದಾಯದವರು ಜಿಲ್ಲೆಯಲ್ಲಿ ಉತ್ತಮ ಬಾಂಧವ್ಯ ಹೊಂದಿರುವುದು ಹೆಮ್ಮೆ ತಂದಿದೆ ಎಂದರು. ಕೆಪಿಸಿಸಿ ರಾಜ್ಯ ವಕ್ತಾರ ಹೆಚ್.ಹೆಚ್.ದೇವರಾಜ್ ಮಾತನಾಡಿ, ಪೊಲೀಸ್ ಅಧೀಕ್ಷಕಿ ಶೃತಿ […]
ಪೊಲೀಸ್ ಇಲಾಖೆ ನೇಮಕಾತಿ- ಮಾಹಿತಿ ಕಾರ್ಯಾಗಾರ
ಉಡುಪಿ, ಜೂನ್ 26: ಪೊಲೀಸ್ ಇಲಾಖೆಯ ವತಿಯಿಂದ ಜೂನ್ 27 ರಂದು ಬೆಳಗ್ಗೆ 9.30ಕ್ಕೆ ಮಲ್ಪೆ ಏಳೂರು ಮೊಗವೀರ ಸಭಾಭವನದ ಮತ್ಸ್ಯನಿಧಿ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಪಾಸಾಗಿರುವ ಕರಾವಳಿ ತೀರದ ಮೀನುಗಾರ ಯುವಕ ಹಾಗೂ ಯುವತಿಯರಿಗೆ ಪೊಲೀಸ್ ಇಲಾಖೆಗೆ ನೇಮಕಾತಿ ಕುರಿತು, ಕರ್ನಾಟಕ ಕೆ.ಎಸ್.ಆರ್.ಪಿ. ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಭಾಸ್ಕರ ರಾವ್ ಮಾಹಿತಿ ಕಾರ್ಯಾಗಾರ ನಡೆಸಲಿದ್ದಾರೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಉಡುಪಿ ಎಸ್ ಪಿ ಲಕ್ಷ್ಮಣ ನಿಂಬರಗಿ ವರ್ಗಾವಣೆ, ನೂತನ ಎಸ್ ಪಿ ಆಗಿ ನಿಶಾ ಜೇಮ್ಸ್

ಉಡುಪಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ಬಿ. ನಿಂಬರಗಿ ಅವರನ್ನು ಬೆಂಗಳೂರು ನಿಸ್ತಂತು ವಿಭಾಗದ ಎಸ್ ಪಿ ಆಗಿ ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಉಡುಪಿ ಜಿಲ್ಲೆಗೆ ನೂತನ ಎಸ್ ಪಿ ಆಗಿ ಬೆಂಗಳೂರಿನ ಕೆ ಎಸ್ ಆರ್ ಪಿ ಕಮಾಂಡೆಂಟ್ ನಿಶಾ ಜೇಮ್ಸ್ ಐಪಿಎಸ್ ಅವರನ್ನು ಸರಕಾರ ನೇಮಕಗೊಳಿಸಿದೆ. ನಿರ್ಗಮನ ಎಸ್ ಪಿ ಲಕ್ಷ್ಮಣ ನಿಂಬರಗಿ ಅವರು ಜಿಲ್ಲೆಯ ಎಸ್ ಪಿ ಆದ ಬಳಿಕ ಪೊಲೀಸ್ ವ್ಯವಸ್ಥೆಯಲ್ಲಿ ಸಾಕಷ್ಟು ಬದಲಾವಣೆ ಮತ್ತು ಮಹತ್ವದ ಅಪರಾದ ಪ್ರಕರಣ […]