ದ.ಕ.: 1.22ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಭಾನುವಾರ ನಡೆದ ಪಲ್ಸ್ ಪೋಲಿಯೊ ಲಸಿಕೆ ಅಭಿಯಾನದಲ್ಲಿ 5 ವರ್ಷದೊಳಗಿನ 1,22,856 ಮಕ್ಕಳಿಗೆ ಲಸಿಕೆ ನೀಡಲಾಯಿತು. ಭಾನುವಾರ ನಗರದ ಲೇಡಿಘೋಷನ್ ಆಸ್ಪತ್ರೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಅಭಿಯಾನಕ್ಕೆ ಚಾಲನೆ ನೀಡಿದರು. ಶಾಸಕರಾದ ವೇದವ್ಯಾಸ ಕಾಮತ್, ಯು.ಟಿ. ಕಾದರ್, ಐವನ್ ಡಿಸೋಜ, ಜಿ.ಪಂ. ಉಪಾಧ್ಯಕ್ಷೆ ಕಸ್ತೂರಿ ಪಂಜ ಮತ್ತಿತರರು ಉಪಸ್ಥಿತರಿದ್ದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಕೃಷ್ಣ ರಾವ್, ಲೇಡಿಘೋಷನ್ ಅಧೀಕ್ಷಕಿ ಡಾ. ಸವಿತಾ, ವೆನ್ ಲಾಕ್ ಅಧೀಕ್ಷಕಿ ಡಾ. ರಾಜೇಶ್ವರಿ […]