ಜಿಲ್ಲೆಯಲ್ಲಿ 73,995 ಮಕ್ಕಳಿಗೆ ಪೋಲಿಯೋ ಲಸಿಕೆ: ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ       

ಉಡುಪಿ: ಫೆಬ್ರವರಿ 27 ರಂದು ನಡೆಯುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಜಿಲ್ಲೆಯ 0-5 ವರ್ಷದೊಳಗಿನ 73,995 ಮಕ್ಕಳಿಗೆ ಪೋಲಿಯೋ ಲಸಿಕೆ ನೀಡಲು ಎಲ್ಲಾ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್ಹಾಲ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿ 0-5 ವರ್ಷದೊಳಗೆ ಗ್ರಾಮೀಣ ಪ್ರದೇಶದ 61,105 ಮತ್ತು ನಗರ ಪ್ರದೇಶದ 12,890 ಸೇರಿದಂತೆ ಒಟ್ಟು 73,995 ಮಕ್ಕಳಿಗೆ ಫೆಬ್ರವರಿ 27 ರಂದು ಪಲ್ಸ್ ಪೋಲಿಯೋ ಲಸಿಕೆ ನೀಡಲು, […]