ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ಪಾಂಡಿಚೆರಿ ಗೃಹಮಂತ್ರಿ ಎ.ನಮಶಿವಯಮ್
ಉಡುಪಿ: ಪಾಂಡಿಚೆರಿಯ ಗೃಹಮಂತ್ರಿಗಳಾದ ಎ.ನಮಶಿವಯಮ್ ತಮ್ಮ ಕುಟುಂಬ ಸಮೇತರಾಗಿ ಶ್ರೀಕೃಷ್ಣ ಮಠಕ್ಕೆ ಆಗಮಿಸಿ ದೇವರ ದರ್ಶನ ಪಡೆದು ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಠದ ದಿವಾನರಾದ ವರದರಾಜ ಭಟ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ ಉಪಸ್ಥಿತರಿದ್ದರು.