ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನ ಶಕ್ತಿ ಪರಿಪೂರ್ಣ ವ್ಯಕ್ತಿತ್ವ ನಿರ್ಮಾಣದಲ್ಲಿ ಕ್ರಾಂತಿ: ಶಾಸಕ ಯಶ್ ಪಾಲ್

ಉಡುಪಿ: ಉಡುಪಿಯ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು ಬಹಳಷ್ಟು ಜನರಿಗೆ ಬದುಕು ಕಟ್ಟಿಕೊಟ್ಟ ಸಂಸ್ಥೆ. ಶ್ರೀ ವಿಭುದೇಶ ತೀರ್ಥ ಶ್ರೀಪಾದರ ದೂರದೃಷ್ಟಿತ್ವದಿಂದ ರೂಪುಗೊಂಡ ಈ ಸಂಸ್ಥೆಯು ಗುಣಮಟ್ಟದ ವಿದ್ಯೆ, ಸಂಸ್ಕಾರ ಹಾಗೂ ಸಂಸ್ಕೃತಿಯ ಅರಿವನ್ನು ನೀಡುವ ಮೂಲಕ ಸಮಾಜದಲ್ಲಿ ಉತ್ತಮ ವ್ಯಕ್ತಿಯ ನಿರ್ಮಾಣ ಮಾಡಲು ಸದಾ ಶ್ರಮಿಸುತ್ತಿದೆ. ನಾನು ಈ ಸಂಸ್ಥೆಯ ಹಳೆ ವಿದ್ಯಾರ್ಥಿ ಎಂಬುದಕ್ಕೆ ಬಹಳ ಹೆಮ್ಮೆಪಡುತ್ತಾ ಇಂದು ಈ ಸಂಸ್ಥೆಗೆ ಆಗಮಿಸಿದ ಜಿಲ್ಲೆಯ ವಿವಿಧ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಇಲ್ಲಿ ಒದಗಿಸಿಕೊಟ್ಟ ಅವಕಾಶವನ್ನು ಸದ್ಬಳಕೆ […]