ಯುವ ಜನತೆಯಿಂದ ಜನಪರ ಕಾರ್ಯಕ್ರಮಗಳು ಜೀವಂತ: ಸಾಧು ಪಾಣರ

ಉಡುಪಿ, ಫೆ.9: ಯುವಜನತೆ ಜನಪರ ಮೌಲ್ಯಗಳನ್ನು ಅರಿತು, ಸಮಾಜದಲ್ಲಿ ಮುಂದಿನ ಪೀಳಿಗೆಗಳಿಗೆ ಜನಪರ ಕಾರ್ಯಕ್ರಮಗಳನ್ನು ಜೀವಂತವಾಗಿರಿಸಲು ಸಹಕರಿಸುವಂತೆ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಸಾಧು ಪಾಣರ ಹೇಳಿದರು. ಅವರು  ಮಂಗಳವಾರ ಅಲೆವೂರು ಪ್ರಗತಿನಗರದ ಡಾ. ಶಿವರಾಮ ಕಾರಂತ ಕಲಾಗ್ರಾಮದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಂಗಣದಲ್ಲಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ವತಿಯಿಂದ ನಡೆದ ವಿಶೇಷ ಘಟಕ ಯೋಜನೆಯಡಿ ಜನಪರ ಉತ್ಸವ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಗ್ರಾಮೀಣ ಭಾಗದ ಜನರು ಆಚರಿಸಿಕೊಂಡು […]