ಪೋಸ್ಟ್ ಮೂಲಕ ಪಿಂಚಣಿದಾರರ ಮನೆ ಬಾಗಿಲಿಗೆ ಡಿಜಿಟಲ್ ಜೀವನ್ ಪ್ರಮಾಣ ಪತ್ರ 

ಉಡುಪಿ: ಅಂಚೆ ಇಲಾಖೆಯ ವತಿಯಿಂದ ಕೇಂದ್ರ ಹಾಗೂ ರಾಜ್ಯ ಸರಕಾರಿ ಮತ್ತು ಇ.ಪಿ.ಎಫ್.ಓ ಪಿಂಚಣಿದಾರರು ಡಿಜಿಟಲ್ ಜೀವನ್ ಪ್ರಮಾಣ ಪತ್ರ ಸೇವೆಯನ್ನು ಪೋಸ್ಟ್ ಮ್ಯಾನ್ ಮೂಲಕ ತಮ್ಮ ಮನೆಬಾಗಿಲಿನಲ್ಲಿಯೇ 70 ರೂ. ಶುಲ್ಕ ಪಾವತಿಸಿ ಪಡೆದುಕೊಳ್ಳಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದ ಅಂಚೆ ಕಚೇರಿ ಅಥವಾ ಪೋಸ್ಟ್ ಮ್ಯಾನ್ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಭಾರತೀಯ ಅಂಚೆ ಇಲಾಖೆಯ ವತಿಯಿಂದ ಪತ್ರ ಲೇಖನ ಸ್ಪರ್ಧೆ

ಉಡುಪಿ: ಭಾರತೀಯ ಅಂಚೆ ಇಲಾಖೆಯ ವತಿಯಿಂದ 18 ವರ್ಷ ಮೇಲ್ಪಟ್ಟವರಿಗೆ, ‘ವಿಶನ್ ಫಾರ್ ಇಂಡಿಯಾ 2047’ ಎಂಬ ವಿಷಯದ ಕುರಿತು ಹಿಂದಿ, ಇಂಗ್ಲೀಷ್ ಹಾಗೂ ಕನ್ನಡ ಭಾಷೆಯಲ್ಲಿ ಪತ್ರಲೇಖನ ಸ್ಪರ್ಧೆಯನ್ನು ಆಯೋಜಿಸಲಾಗಿದೆ. ಸ್ಪರ್ಧಾಳುಗಳು ಅಂತರ್ದೇಶೀಯ ಪತ್ರದಲ್ಲಿ ಬರೆದ ಕೈಬರಹದ ಪ್ರತಿಯನ್ನು ಅಂಚೆ ಅಧೀಕ್ಷಕರು, ಉಡುಪಿ ಅಂಚೆ ವಿಭಾಗ, ಉಡುಪಿ ಇವರಿಗೆ ಸಲ್ಲಿಸಲು ಅಕ್ಟೋಬರ್ 31 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ www.indiapost.gov.in, www.karnatakapost.gov.in ಅಥವಾ ದೂರವಾಣಿ ಸಂಖ್ಯೆ: 0820-2521780 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಉಡುಪಿ ವಿಭಾಗದ […]