ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ ಮುಂದೂಡಿಕೆ
ಬೆಂಗಳೂರು: ಇದೇ ಏಪ್ರಿಲ್ 28 ರಿಂದ ನಡೆಯಬೇಕಿದ್ದ ದ್ವಿತೀಯ ಪಿಯುಸಿ ವಿಜ್ಞಾನ ವಿದ್ಯಾರ್ಥಿಗಳ ಪ್ರಾಯೋಗಿಕ ಪರೀಕ್ಷೆಗಳನ್ನು ಕೋವಿಡ್ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ ಎಂದು ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ. ವಿವಿಧ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರು, ಜನಪ್ರತಿನಿಧಿಗಳು, ಪೋಷಕರುಗಳೊಂದಿಗೆ ಅಧಿಕಾರಿ ಹಂತದ ಸುದೀರ್ಘ ಚರ್ಚೆಗಳನ್ನು ನಡೆಸಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ, ವಿದ್ಯಾರ್ಥಿ ಹಿತ ಕಾಯಲು ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳು ಪರೀಕ್ಷೆ ಮುಂದೂಡಿರುವ ಕಾರಣ ವಿಚಲಿತರಾಗದೇ ಏಕಾಗ್ರತೆಯಿಂದ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆಯನ್ನು ಮುಂದುವರೆಸಬೇಕೆಂದು ಸಚಿವರು ಸಲಹೆ ನೀಡಿದ್ದಾರೆ.