ಬಿಹಾರದಲ್ಲಿ ಮತ್ತೆ ಜೆಡಿಯು-ಬಿಜೆಪಿ ಮೈತ್ರಿಕೂಟಕ್ಕೆ ಅಧಿಕಾರ: ಸಿ ವೋಟರ್ ಸಮೀಕ್ಷೆ
ಪಟ್ನಾ: ಬಿಹಾರ ವಿಧಾನಸಭೆಗೆ ಇದೇ ಅಕ್ಟೋಬರ್ 28ರಿಂದ ಮೂರು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ನವೆಂಬರ್ 10ರಂದು ಫಲಿತಾಂಶ ಪ್ರಕಟವಾಗಲಿದೆ. ಅದಕ್ಕೂ ಮುನ್ನ ಕೆಲ ಟಿವಿ ಮಾಧ್ಯಮಗಳ ಚುನಾವಣಾಪೂರ್ವ ಸಮೀಕ್ಷೆಗಳು ರಾಜಕೀಯ ಪಕ್ಷಗಳ ಭವಿಷ್ಯವನ್ನು ನಿರ್ಧರಿಸುವ ಪ್ರಯತ್ನ ನಡೆಸುತ್ತಿವೆ. ಆಡಳಿತಾರೂಢ ಮುಖ್ಯಮಂತ್ರಿ ನಿತೀಶ್ ಕುಮಾರ್ ನೇತೃತ್ವದ ಎನ್‌ಡಿಎ ಮೈತ್ರಿಕೂಟವು 160 ಸೀಟುಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಟೈಮ್ಸ್ ನೌ-ಸಿ ವೋಟರ್ ಸಮೀಕ್ಷೆ ಹೇಳಿದೆ. 243 ಸೀಟುಗಳ ವಿಧಾನಸಭೆಯಲ್ಲಿ ಅಧಿಕಾರದ ಗದ್ದುಗೆ ಹಿಡಿಯಲು 122 ಮ್ಯಾಜಿಕ್ ಸಂಖ್ಯೆ ತಲುಪಬೇಕಿದೆ. […]