ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಸಮಿತಿಗೆ ಅಧಿಕಾರ ಹಸ್ತಾಂತರ

ಉಡುಪಿ, ಫೆ. 3: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025–28ನೇ ಸಾಲಿನ ನೂತನ ಸಮಿತಿಗೆ ಅಧಿಕಾರವನ್ನು ಹಸ್ತಾಂತರಿಸಲಾಯಿತು. ಉಡುಪಿ ಪತ್ರಿಕಾ ಭವನದಲ್ಲಿ ಮಂಗಳವಾರ ನಡೆದ ಸರ್ವಸದಸ್ಯರ ಸಭೆಯಲ್ಲಿ ನಿಕಟ ಪೂರ್ವ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ನೂತನ ಅಧ್ಯಕ್ಷ ಸುಬ್ರಹ್ಮಣ್ಯ ಜಿ. ಕುರ್ಯ ಅವರಿಗೆ ಅಧಿಕಾರವನ್ನು ಹಸ್ತಾಂತರಿಸಿದರು. ಸಂಘದ 2021–25ನೇ ಸಾಲಿನ ಲೆಕ್ಕಚಾರವನ್ನು ನಿಕಟಪೂರ್ವ ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಸಭೆಗೆ ಮಂಡಿಸಿದರು. ಈ ಅವಧಿಯಲ್ಲಿ ಉಳಿಸಿದ 77,323 ರೂ. ನಗದು ಹಣವನ್ನು ನೂತನ ಕೋಶಾಧಿಕಾರಿ ಹರೀಶ್ […]