ಕರ್ನಾಟಕದಲ್ಲಿ ಪವರ್ ಟಿವಿಯನ್ನು ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕಾರ್ಯವೇ?.: ದಿನೇಶ್ ಗುಂಡೂರಾವ್ ಪ್ರಶ್ನೆ
ಬೆಂಗಳೂರು: ಕರ್ನಾಟಕದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪನವರ ಮಗನ ಭ್ರಷ್ಟಾಚಾರ ಬಿಚ್ಚಿಟ್ಟ ಪವರ್ ಟಿವಿ ಅನ್ನು ಪೊಲೀಸ್ ಬಲ ಪ್ರಯೋಗಿಸಿ ಎರಡು ವಾರ ಮುಚ್ಚಿಸಿದ್ದು ಪತ್ರಿಕಾ ಸ್ವಾತಂತ್ರ್ಯದ ಘನತೆ ಕಾಪಾಡಿದ ಕೆಲಸವೆ? ಎಂದು ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಪ್ರಶ್ನಿಸಿದ್ದಾರೆ. ಮುಂಬೈ ಪೊಲೀಸರು ಬುಧವಾರ ಬೆಳಗ್ಗೆ ಪತ್ರಕರ್ತ ಅರ್ನಬ್ ಗೋಸ್ವಾಮಿ ಅವರನ್ನು ಬಂಧಿಸಿದ್ದನ್ನು ಬಿಜೆಪಿ ನಾಯಕರು ಖಂಡಿಸಿದ್ದು, ಇದಕ್ಕೆ ದಿನೇಶ್ ಗುಂಡೂರಾವ್ ಟ್ವಿಟ್ ಮೂಲಕ ತಿರುಗೇಟು ನೀಡಿದ್ದಾರೆ.