ದಿನಕ್ಕೊಂದು ಕನ್ನಡ ಪತ್ರಿಕೆ ತಿಂಗಳಿಗೊಂದು ಕನ್ನಡ ಪುಸ್ತಕ ಓದುವ ಪರಿಪಾಠ ರೂಢಿಸಿಕೊಳ್ಳಿ: ಸುನಿಲ್ ಕುಮಾರ್ ಕರೆ

ಬೆಂಗಳೂರು: ಪ್ರತಿದಿನ ಕನ್ನಡ ಪತ್ರಿಕೆಯೊಂದನ್ನು ಓದುವ ಹಾಗೂ ತಿಂಗಳಿಗೊಂದು ಕನ್ನಡ ಪುಸ್ತಕ ಕೊಂಡು ಓದುವ ಹವ್ಯಾಸ ಬೆಳೆಸುವುದರ ಜತೆಗೆ ಎರಡು ತಿಂಗಳಿಗೊಂದು ಕನ್ನಡ ಚಲನಚಿತ್ರ ನೋಡುವ ಅಭ್ಯಾಸ ರೂಢಿಸಿಕೊಂಡಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯನ್ನು ಬೆಳೆಸಲು ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಸಚಿವ ವಿ ಸುನಿಲ್ ಕುಮಾರ್ ಹೇಳಿದ್ದಾರೆ. ಅವರು ಇಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದ ಆವರಣದಲ್ಲಿ ಭಾರತಾಂಬೆ ಹಾಗೂ ಕನ್ನಡಾಂಬೆಯ ಭಾವಚಿತ್ರಗಳಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಇಲಾಖೆ ಸಚಿವರಾಗಿ ಕಾರ್ಯಾರಂಭ ಮಾಡಿದರು. […]