ಕೊಡವೂರು: ಆವಾಸ್ ಯೋಜನೆ ಫಲಾನುಭವಿಗಳಿಗೆ ಮನೆ ಹಸ್ತಾಂತರ

ಕೊಡವೂರು: ದೇಶದ ಪ್ರತಿಯೊಬ್ಬರಿಗೂ ಮನೆ ಎಂಬ ಯೋಜನೆಯನ್ವಯ ಪ್ರಧಾನಮಂತ್ರಿ ಆವಾಸ್ ಯೋಜನೆ ಮೂಲಕ ಕೊಡವೂರು ವಾರ್ಡಿನಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು ನೇತೃತ್ವದಲ್ಲಿ 8 ಮನೆಗಳು ನಿರ್ಮಾಣಗೊಂಡಿದ್ದು, ಇವುಗಳಲ್ಲಿ ಮೊದಲ ಮನೆ “ಸೃಜನ್” ಇದರ ಗೃಹಪ್ರವೇಶವು ಜ.14 ಶನಿವಾರದಂದು ನಡೆಯಿತು. ಪತ್ರಕರ್ತ ಜನಾರ್ಧನ ಕೊಡವೂರು ದೀಪಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮನೆಯನ್ನು ಫಲಾನುಭವಿಗಳಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ನಗರಸಭಾ ಸದಸ್ಯ ವಿಜಯ ಕೊಡವೂರು, ಹಿರಿಯರಾದ ಶಂಭುಮಾಸ್ಟರ್ ಹಾಗೂ ಸುರೇಶ್ ಉಪಸ್ಥಿತರಿದ್ದರು. 5 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ […]