ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ: 31 ಡಿಸೆಂಬರ್ 2024 ರವರೆಗೆ ಮುಂದುವರಿಕೆ
ಪ್ರಧಾನ ಮಂತ್ರಿ ಆವಾಸ್ ಯೋಜನೆ-ನಗರ (PMAY-U) – ಸರ್ವರಿಗೂ ವಸತಿ ಯೋಜನೆಯನ್ನು 31 ಡಿಸೆಂಬರ್ 2024 ರವರೆಗೆ ಮುಂದುವರಿಸಲು ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈಗಾಗಲೇ ಮಂಜೂರಾಗಿರುವ 122 ಲಕ್ಷ ಮನೆಗಳನ್ನು 2022ರ ಮಾರ್ಚ್ 31ರವರೆಗೆ ಪೂರ್ಣಗೊಳಿಸಲು ಆರ್ಥಿಕ ನೆರವು ನೀಡಲಾಗಿದೆ. ಈ ಯೋಜನೆಯು ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳು ಮತ್ತು ಕೇಂದ್ರ ನೋಡಲ್ ಏಜೆನ್ಸಿಗಳ ಮೂಲಕ ದೇಶದ ನಗರ ಪ್ರದೇಶಗಳಲ್ಲಿನ ಎಲ್ಲಾ ಅರ್ಹ ಫಲಾನುಭವಿಗಳಿಗೆ ಎಲ್ಲಾ ಹವಾಮಾನದ ಪಕ್ಕಾ ಮನೆಗಳನ್ನು ಒದಗಿಸಲು ಕೇಂದ್ರ ಸರ್ಕಾರವು ಜಾರಿಗೊಳಿಸುತ್ತಿರುವ ಪ್ರಮುಖ […]