“ಸೂರ್ಯವಂಶಿ” ರಾಘವನ ಪ್ರತಿಷ್ಠೆಯ ಬಳಿಕ “ಪ್ರಧಾನಮಂತ್ರಿ ಸೂರ್ಯೋದಯ ಯೋಜನೆ” ಘೋಷಿಸಿದ ಮೋದಿ: ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳ ಮಾಹಿತಿ ಇಲ್ಲಿದೆ

ನವದೆಹಲಿ: ಅಯೋಧ್ಯೆಯಲ್ಲಿ ರಾಮಮಂದಿರ ಪ್ರಾಣ ಪ್ರತಿಷ್ಠೆ ಕಾರ್ಯಕ್ರಮದ ಬಳಿಕ ಪ್ರಧಾನಿ ಮೋದಿ ಸೌರಶಕ್ತಿ ಯೋಜನೆಯಾದ “ಪ್ರಧಾನ ಮಂತ್ರಿ ಸೂರ್ಯೋದಯ” ( Pradhanmantri Suryoday Yojana) ಯೋಜನೆಯನ್ನು ಘೋಷಿಸಿದ್ದಾರೆ. ಇದರ ಅಡಿಯಲ್ಲಿ ದೇಶದ 1 ಕೋಟಿ ಮನೆಗಳ ಛಾವಣಿಯ ಮೇಲೆ ಸೌರಶಕ್ತಿ ಫಲಕಗಳನ್ನು ಅಳವಡಿಸಲಾಗುವುದು. ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಈ ಕುರಿತು ಸಭೆ ನಡೆಸಲಾಗಿದೆ. “ಪ್ರಪಂಚದ ಎಲ್ಲಾ ಭಕ್ತರು ಸೂರ್ಯವಂಶಿ ಭಗವಾನ್ ಶ್ರೀರಾಮನ ಬೆಳಕಿನಿಂದ ಯಾವಾಗಲೂ ಶಕ್ತಿಯನ್ನು ಪಡೆಯುತ್ತಾರೆ. ಇಂದು, ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆಯ ಜೀವನದ ಶುಭ ಸಂದರ್ಭದಲ್ಲಿ, ಭಾರತದ […]