ಕೋವಿಡ್ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದರೆ 7 ವರ್ಷ ಜೈಲು: ಕೇಂದ್ರ ಸರ್ಕಾರದಿಂದ ಕಠಿಣ ಕ್ರಮ

ನವದೆಹಲಿ: ಕೊರೊನಾ ವೈರಸ್ ಸೋಂಕಿನ ವಿರುದ್ಧ ಹೋರಾಡುತ್ತಿರುವ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗಿರುವ ಕೇಂದ್ರ ಸರಕಾರ ಹಲ್ಲೆ ನಡೆಸುವವರಿಗೆ 7 ವರ್ಷಗಳ ವರೆಗೆ ಜೈಲು ಶಿಕ್ಷೆ ವಿಧಿಸಲು ಅವಕಾಶವುಳ್ಳ ಸುಗ್ರೀವಾಜ್ಞೆ ರೂಪಿಸಿದೆ. ಇಂತಹ ಪ್ರಕರಣಗಳನ್ನು ಸಂಜ್ಞೇಯ ಅಪರಾಧ (ಕಾಗ್ನೈಜಿಬಲ್) ಎಂದು ಪರಿಗಣಿಸಲು ಮತ್ತು ಜಾಮೀನು ನೀಡದೇ ಇರಲು ಸುಗ್ರೀವಾಜ್ಞೆಯಲ್ಲಿ ಅವಕಾಶವಿದೆ. ‘ನಾವು ಸುಗ್ರೀವಾಜ್ಞೆ ರೂಪಿಸಿದ್ದೇವೆ. ಇದರ ಅನ್ವಯ ತಪ್ಪಿತಸ್ಥರಿಗೆ ₹ 1 ಲಕ್ಷದಿಂದ ₹ 5 ಲಕ್ಷದ ವರೆಗೆ ದಂಡ ವಿಧಿಸಲೂ […]