ಪ್ರಧಾನಿ ಮೋದಿಯನ್ನು ಮತ್ತೆ ಅಭಿನಂದಿಸಿ ಪ್ರಮೋದ್ ಮಧ್ವರಾಜ್..!!
ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ದಾರೆ. ವಿವಾದಿತ ಮೂರು ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆದ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿರುವ ಪ್ರಮೋದ್, ರೈತರ ಅವಿರತ ಹೋರಾಟ ಮತ್ತು ಮನವಿಯನ್ನು ಪರಿಗಣಿಸಿ 3 ಕೃಷಿ ಕಾಯ್ದೆಯನ್ನು ವಾಪಾಸು ಪಡೆಯುವ ಐತಿಹಾಸಿಕ ನಿರ್ಧಾರ ಕೈಗೊಂಡ ಪ್ರಧಾನಿಯವರನ್ನು ಹೃತ್ಪೂರ್ವಕವಾಗಿ ಅಭಿನಂದಿಸುತ್ತೇನೆಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಮೂರ್ನಾಲ್ಕು ದಿನಗಳ ಹಿಂದೆ ಪೇಜಾವರ ಮಠದ ವಿಶ್ವೇಶತೀರ್ಥ ಶ್ರೀಪಾದರಿಗೆ ಪದ್ಮವಿಭೂಷಣ ಪ್ರಶಸ್ತಿ ದೊರೆತ […]