ಪ್ರಮೋದ್ ಮಧ್ವರಾಜ್ ಬಿಜೆಪಿಗೆ ಬರಲು ವಿರೋಧವಿಲ್ಲ: ಕುಯಿಲಾಡಿ

ಉಡುಪಿ: ಮಾಜಿ ಸಚಿವ, ಕಾಂಗ್ರೆಸ್ ಮುಖಂಡ ಪ್ರಮೋದ್ ಮಧ್ವರಾಜ್ ಅವರು ಬಿಜೆಪಿಗೆ ಬರಲು ಯಾವುದೇ ವಿರೋಧವಿಲ್ಲ. ಆದರೆ, ಅವರನ್ನು ಏಕಾಏಕಿಯಾಗಿ ಪಕ್ಷಕ್ಕೆ ಬರಮಾಡಿಕೊಳ್ಳಲು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಉಡುಪಿಯಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಮೋದ್ ಬಿಜೆಪಿ ಸೇರ್ಪಡೆ ವಿಚಾರದಲ್ಲಿ ಈ ಹಿಂದೆ ನಮಗೆ ಎರಡ್ಮೂರು ಬಾರಿ ಕಹಿ ಅನುಭವ ಆಗಿದೆ. ದನ ಬಂದರೆ ಕರು ಬರುತ್ತದೆ ಎಂದು ಹೇಳಿದ್ದರು. ಆದರೆ ಅದು ಆಗಿಲ್ಲ. ಅವರ ಮಾನಸಿಕತೆ ಯಾವ […]