ಕುಂದಾಪುರ: ಅ.17 ರಂದು ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಸ್ವಯಂಪ್ರೇರಿತ ರಕ್ತದಾನ ಶಿಬಿರ
ಕುಂದಾಪುರ: ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ, ಕುಂದಾಪುರ ಉಡುಪಿ ಜಿಲ್ಲೆ, ಅಭಯಹಸ್ತ ಚಾರಿಟೇಬಲ್ ಟ್ರಸ್ಟ್(ರಿ) ಉಡುಪಿ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ(ರಿ) ಕುಂದಾಪುರ ಇವರ ಸಹಕಾರದಲ್ಲಿ ಅ.17 ರಂದು ಕುಂದಾಪುರದ ಕಲಾಮಂದಿರ ಸರಕಾರಿ ಜೂನಿಯರ್ ಕಾಲೇಜಿನಲ್ಲಿ ಬೆಳಿಗ್ಗೆ 8.30 ರಿಂದ ಮಧ್ಯಾಹ್ನ 1.00 ಗಂಟೆವರೆಗೆ ನಡೆಯಲಿರುವುದು ಎಂದು ಪ್ರಕಟಣೆ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ: 8861442007/ 9900230758/9535321649
ವಾಶ್ ರೂಂ ನಲ್ಲಿ ವೀಡಿಯೋ ರೆಕಾರ್ಡಿಂಗ್ ತನಿಖೆಗೆ ಹಿಂದೇಟು ಖಂಡನೀಯ: ಪ್ರಮೋದ್ ಮಧ್ವರಾಜ್
ಉಡುಪಿ: ಇಲ್ಲಿನ ಖಾಸಗಿ ಕಾಲೇಜಿನ ವಾಶ್ ರೂಂ ನಲ್ಲಿ ಯುವತಿಯ ವೀಡಿಯೋ ರೆಕಾರ್ಡ್ ಮಾಡಿರುವುದು ಸಮಸ್ತ ಮಾನವ ಕುಲ ತಲೆ ತಗ್ಗಿಸುವಂತಹ ಕೃತ್ಯ ಎಂದು ಬಿಜೆಪಿ ಮುಖಂಡ ಪ್ರಮೋದ್ ಮಧ್ವರಾಜ್ ತಿಳಿಸಿದರು. ನಗರದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಘಟನೆಯನ್ನು ಸಣ್ಣ ವಿಚಾರ ಎಂದು ಸರಕಾರ ಹಾಗೂ ಪೊಲೀಸ್ ಇಲಾಖೆ ತಿರಸ್ಕರಿಸಿರುವುದು ಖಂಡನೀಯ. ಪೊಲೀಸ್ ಇಲಾಖೆ ಬಗ್ಗೆ ಸಂಶಯವಿದೆ. ಘಟನೆಯಿಂದಾಗಿ ಹೆಣ್ಣು ಮಕ್ಕಳ ಮರ್ಯಾದೆಗೆ ಧಕ್ಕೆಯಾಗಿದೆ ಎಂದರು. ಇಂತಹ ಗಂಭೀರ ವಿಚಾರವನ್ನು ಗೃಹಮಂತ್ರಿಗಳು ಕ್ಷುಲ್ಲಕವಾಗಿ ಪರಿಗಣಿಸಿದ್ದಾರೆ. ಇದಕ್ಕೆ ಹಲವು […]
ಪ್ಯಾರಾಲಿಂಪಿಕ್ ಕ್ರೀಡಾಪಟು ರೂಪಾ ಅವರಿಗೆ ಆರ್ಥಿಕ ಸಹಾಯ ಹಸ್ತ ಚಾಚಿ ಹೃದಯ ವೈಶಾಲ್ಯ ಮೆರೆದ ಪ್ರಮೋದ್ ಮಧ್ವರಾಜ್
ಉಡುಪಿ: ದಾವಣಗೆರೆಯ ಹರಿಹರ ನಿವಾಸಿ ರೂಪಾ ಎನ್ ಪ್ಯಾರಾಲಿಂಪಿಕ್ ವಾಲಿಬಾಲ್ ಕ್ರೀಡಾಪಟುವಾಗಿದ್ದು, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿ ಹಲವಾರು ಸ್ಪರ್ಧೆಗಳಲ್ಲಿ ಗೆದ್ದಿದ್ದಾರೆ. ಇದೀಗ ಅಂತಾರಾಷ್ಟ್ರೀಯ ಸ್ಪರ್ಧೆಯಲ್ಲಿ ಟೀಂ ಇಂಡಿಯಾವನ್ನು ಪ್ರತಿನಿಧಿಸಲು ಆಯ್ಕೆಯಾಗಿದ್ದರು. ಜುಲೈ 3 ರಿಂದ 8 ಕಝಾಕಿಸ್ತಾನ್ ನ ಅಲ್ಮಾಟಿಯಲ್ಲಿ ನಡೆಯಲಿರುವ ವಿಶ್ವ ಪ್ಯಾರಾವಾಲಿ ಸಿಟ್ಟಿಂಗ್ ವಾಲಿಬಾಲ್ ಏಷ್ಯನ್ ವಲಯ ಚಾಂಪಿಯನ್‌ಶಿಪ್‌ನಲ್ಲಿ ಭಾರತವನ್ನು ಪ್ರತಿನಿಧಿಸಲು ಪ್ಯಾರಾಲಿಂಪಿಯನ್‌ಗೆ ಆರ್ಥಿಕ ಸಹಾಯದ ಅಗತ್ಯವಿದ್ದು, ರೂಪಾ ಅವರ ಕಝಾಕಿಸ್ತಾನ್ ಪ್ರವಾಸದ ಖರ್ಚಿಗೆ ಪ್ಯಾರಾಲಿಂಪಿಕ್ ವಾಲಿಬಾಲ್ ಫೆಡರೇಶನ್ ಆಫ್ ಇಂಡಿಯಾ ವತಿಯಿಂದ ಹಣ […]
ರಾಜ್ಯದಲ್ಲಿ ಅತಿ ಹೆಚ್ಚು ಬಾರಿ ಪಕ್ಷಾಂತರ ಮಾಡಿರುವುದು ಸಿದ್ದರಾಮಯ್ಯನವರು: ಪ್ರಮೋದ್ ಮಧ್ವರಾಜ್ ತಿರುಗೇಟು
ಉಡುಪಿ: ಈ ರಾಜ್ಯದಲ್ಲಿ ಯಾರಾದರೂ ಹೆಚ್ಚು ಪಕ್ಷಾಂತರ ಮಾಡಿದ್ದರೆ ಅದು ಸಿದ್ದರಾಮಯ್ಯ. ಅವರು ತಮ್ಮ ರಾಜಕೀಯ ಜೀವನದಲ್ಲಿ ಒಟ್ಟು 7 ಬಾರಿ ಪಕ್ಷಗಳನ್ನು ಬದಲಾಯಿಸಿದ್ದು ನಾನು ಹುಟ್ಟಿನಿಂದ ಕಾಂಗ್ರೆಸ್ ಪಕ್ಷದಲ್ಲಿದ್ದು ಈಗ ಸನ್ನಿವೇಶಕ್ಕೆ ಅನುಗುಣವಾಗಿ ಬಿಜೆಪಿ ಸೇರಿದ್ದೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದರು. ಅವರು ಶುಕ್ರವಾರ ತಮ್ಮ ನಿವಾಸದಲ್ಲಿ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಉಡುಪಿಯಲ್ಲಿ ನಡೆದ ಪ್ರಜಾಧ್ವನಿ ಸಮಾವೇಶದಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ನನ್ನನ್ನು ಪಕ್ಷಾಂತರಿ […]
ಬಿಜೆಪಿ ಟಿಕೆಟ್ ದಕ್ಕಿಸಿಕೊಳ್ಳಲು ಪ್ರಮೋದ್ ಮಧ್ವರಾಜ್ ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದಿದ್ದಾರೆ: ರಮೇಶ್ ಕಾಂಚನ್
ಉಡುಪಿ: ಬಿಜೆಪಿ ಟಿಕೆಟ್ ದಕ್ಕಿಸಿಕೊಳ್ಳಲು ತಮ್ಮ ಆತ್ಮಸಾಕ್ಷಿಗೆ ದ್ರೋಹ ಬಗೆದು ಅವಕಾಶವಾದದ ರಾಜಕಾರಣವನ್ನು ಪ್ರಮೋದ್ ಮಧ್ವರಾಜ್ ಅವರು ಮಾಡುತ್ತಿದ್ದಾರೆ. ನಮೋ ಎಂದರೆ ಮೋಸ ಎಂದಿದ್ದ ಅವರು ಕಳೆದ ಬಾರಿ ಖಾಸಗಿ ಪತ್ರಿಕೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯಕ್ಕೆ ನಂಬರ್ ವನ್ ಶಾಸಕನಾಗಿ ಮೂಡಿ ಬಂದಿದ್ದರೂ ಬಿಜೆಪಿಯ ಕಾರ್ಯಕರ್ತರು ನನ್ನನ್ನು ಸೋಲಿಸಿದ್ದಕ್ಕೆ ನನಗೆ ಕಿಂಚಿತ್ತೂ ಬೇಸರವಿಲ್ಲ, ಮೋದಿಯವರ ಕೈ ಬಲಪಡಿಸಲು ನನ್ನನ್ನು ಸೋಲಿಸಿದ್ದಾರೆ ಎಂಬ ಹೇಳಿಕೆ ನೀಡಿದ್ದಾರೆ. ಈ ಮಾತುಗಳು ಅವರ ಅವಕಾಶವಾದ ರಾಜಕಾರಣಕ್ಕೆ ಹಿಡಿದ ಕೈಗನ್ನಡಿಯಾಗಿದೆ ಎಂದು ಉಡುಪಿ […]