ಪ್ರಮೋದ್ ಮಧ್ವರಾಜ್ ವಿರುದ್ಧ ಆರೋಪ: ಕೇಂದ್ರ ಮಾಹಿತಿ ಆಯೋಗದಿಂದ ಟಿ. ಜೆ. ಅಬ್ರಾಹಂ ಅರ್ಜಿ ವಜಾ
ಉಡುಪಿ: ಸಾಮಾಜಿಕ ಕಾರ್ಯಕರ್ತ ಟಿ.ಜೆ. ಅಬ್ರಾಹಂ ಎಂಬವರು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಸಿಂಡಿಕೇಟ್ ಬ್ಯಾಂಕ್‌ಗೆ ನಕಲಿ ದಾಖಲೆ ಸಲ್ಲಿಸಿ ಸಾಲ ಪಡೆದಿದ್ದಾರೆ. ಇದರಲ್ಲಿ ಬ್ಯಾಂಕ್ ಸಿಬ್ಬಂದಿ ಕೂಡ ಶಾಮೀಲಾಗಿದ್ದರೆ ಎಂದು ಆರೋಪಿಸಿ ಕೆಲವು ದಾಖಲೆಗಳನ್ನು ಕೋರಿ ಸಿಂಡಿಕೇಟ್ ಬ್ಯಾಂಕಿನ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿಯವರಿಗೆ(ಸಿಪಿಐಓ) ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ಪರಿಶೀಲಿಸಿದ ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ, ಅರ್ಜಿಯು ಸಾರ್ವಜನಿಕ ಹಿತಾಸಕ್ತಿಯಡಿಯಲ್ಲಿ ಬರುವುದಿಲ್ಲ ಎಂಬುದಾಗಿ ತಿಳಿಸಿ ಖಾಸಗಿ ಮಾಹಿತಿಯನ್ನು ಕೇಳಿರುವುದರಿಂದ ದೂರು […]