679 ಫಲಾನುಭವಿಗಳಿಗೂ ಮನೆ ನಿರ್ಮಿಸಿ ಕೊಡಬೇಕು: ಪ್ರಮೋದ್ ಮಧ್ವರಾಜ್

ಉಡುಪಿ: ನನ್ನ ಅವಧಿಯಲ್ಲಿ ನಗರ ಆಶ್ರಯ ಸಮಿತಿ ಸಭೆಯಲ್ಲಿ ಆಯ್ಕೆಗೊಂಡ ಎಲ್ಲ ಅರ್ಹ 679 ಫಲಾನುಭವಿಗಳಿಗೆ ಪ್ರಸ್ತುತ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ನಿರ್ಮಿಸಲಾಗುವ ವಸತಿ ಸಮುಚ್ಚಯದಲ್ಲಿ ಮನೆ ನಿರ್ಮಿಸಿಕೊಡಬೇಕು ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದರು. ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರಸಭೆಯಲ್ಲಿ ಕಾಂಗ್ರೆಸ್ ಆಡಳಿತ ಇದ್ದಂತಹ ಸಂದರ್ಭದಲ್ಲಿ ಸರಳೇಬೆಟ್ಟು, ಸಣ್ಣಕ್ಕಿಬೆಟ್ಟುವಿನಲ್ಲಿ 11 ಎಕರೆ ಸರ್ಕಾರಿ ಜಾಗವನ್ನು ಗುರುತಿಸಿ, ನನ್ನ ಅಧ್ಯಕ್ಷತೆಯಲ್ಲಿ ಒಟ್ಟು 679 ಅರ್ಹ ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ಇದರಲ್ಲಿ ಆಯ್ಕೆಯಾದ […]