ಉಡುಪಿ-ಚಿಕ್ಕಮಗಳೂರು ಲೋಕಸಭೆ ಕ್ಷೇತ್ರ: ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಮೋದ್ ಮಧ್ವರಾಜ್ ಕಣಕ್ಕೆ; ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ.

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಚಿಹ್ನೆಯಡಿ ಸ್ಪರ್ಧೆ ಮಾಡಲಿದ್ದು, ಜೆಡಿಎಸ್ ಬಿ ಫಾರಂ ಪಡೆದುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ – ಜೆಡಿಎಸ್ ಸೀಟು ಹಂಚಿಕೆ ಒಪ್ಪಂದಂತೆ ಉಡುಪಿ – ಚಿಕ್ಕಮಗಳೂರು ಕ್ಷೇತ್ರ ಜೆಡಿಎಸ್ ಪಾಲಾಗಿತ್ತು. ಈ ಹಿನ್ನೆಲೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಯಾರು ಸ್ಪರ್ಧಿಸಲಿದ್ದಾರೆ ಎಂಬುವುದು ಭಾರೀ ಕುತೂಹಲ ಸೃಷ್ಟಿಸಿತ್ತು. ಆದರೆ ಇಂದು ಕಾಂಗ್ರೆಸ್ ಮುಖಂಡ, ಮಾಜಿ ಸಚಿವ ಪ್ರಮೋದ್ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಚಿಹ್ನೆಯಡಿ ಸ್ಪರ್ಧಿಸುವುದು ಖಚಿತಗೊಳ್ಳುತ್ತಿದ್ದಂತೆ ಗೊಂದಲಗಳಿಗೆ ತೆರೆಬಿದ್ದಿದೆ. […]