ಜಿಲ್ಲಾ ಬಿಜೆಪಿ ಕಚೇರಿಗೆ ಪ್ರಮೋದ್ ಸಾವಂತ್ ಭೇಟಿ

ಉಡುಪಿ: ಜಿಲ್ಲಾ ಪ್ರವಾಸದಲ್ಲಿರುವ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಶನಿವಾರದಂದು ಉಡುಪಿ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಜಿಲ್ಲಾ ಬಿಜೆಪಿ ವತಿಯಿಂದ ಪ್ರಮೋದ್ ಸಾವಂತ್ ಅವರನ್ನು ಅಭಿನಂದಿಸಲಾಯಿತು. ಇದಕ್ಕೂ ಮುನ್ನ ಅವರು ಶ್ರೀಕೃಷ್ಣಮಠಕ್ಕಾಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಪರ್ಯಾಯ ಮಠದ ದಿವಾನ ವರದರಾಜ ಭಟ್ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಡಾ.ಕೃಷ್ಣಪ್ರಸಾದ್ ಹಾಗೂ ಪರ್ಯಾಯ ಸ್ವಾಗತ ಸಮಿತಿಯ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರ್ […]