ಪಕ್ಷದ ಕಾರ್ಯತಂತ್ರದಂತೆ ಚುನಾವಣೆ ಎದುರಿಸುತ್ತೇವೆ: ಪ್ರಸಾದ್ ರಾಜ್ ಕಾಂಚನ್

ಉಡುಪಿ: ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ಮತ್ತು ತಂತ್ರಗಾರಿಕೆ ಇಟ್ಟುಕೊಂಡು ಚುನಾವಣೆ ಎದುರಿಸುತ್ತೇವೆ ಹೊರತು ಎದುರಾಳಿ ಅಭ್ಯರ್ಥಿಗಳ ಆಲೋಚನೆಯಿಂದಲ್ಲ. ಬಿಜೆಪಿಯ ಅಭ್ಯರ್ಥಿ ಒಂದೇ ಸಮುದಾಯಕ್ಕೆ ಸಂಬಂಧಪಟ್ಟಿದ್ದರೂ, ಇಲ್ಲಿನ ಮತದಾರರು ಬುದ್ದಿವಂತರು ಮತ್ತು ವಿದ್ಯಾವಂತರೂ ಆಗಿರುವ ಕಾರಣ ಸರಿಯಾದ ಶಾಸಕನನ್ನು ಆಯ್ಕೆ ಮಾಡಲಿದ್ದಾರೆ ಎಂದು ಉಡುಪಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು. ಅವರು ಕಾಂಗ್ರೆಸ್ ಭವನದಲ್ಲಿ ಆಯೋಜಿಸಲಾಗಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು. ಕಳೆದ ಆರು ತಿಂಗಳಿನಿಂದ ಕ್ಷೇತ್ರದಲ್ಲಿ ಸಿದ್ದತೆ ನಡೆಸುತ್ತಿದ್ದು, 100 ಸದಸ್ಯರ ಕಮಿಟಿ […]