ರಾಜ್ಯದಾದ್ಯಂತ ಉಚಿತ ನೇತ್ರ ತಪಾಸಣೆ-ಚಿಕಿತ್ಸಾ ಶಿಬಿರ ನಡೆಸಲು ಚಿಂತನೆ: ಶ್ರೀರಾಮುಲು

ಉಡುಪಿ: ರಾಜ್ಯದಲ್ಲಿ ದೃಷ್ಟಿ ನೀತಿ ಸಮಿತಿ ರಚಿಸಲು ಈಗಾಗಲೇ ಚಿಂತನೆ ನಡೆಸಲಾಗಿದ್ದು, ಅದರ ಮೂಲಕ ಎಲ್ಲ ಜಿಲ್ಲೆಗಳಲ್ಲಿ ಉಚಿತ ನೇತ್ರ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರಗಳನ್ನು ನಡೆಸಿ ಪ್ರತಿಯೊಬ್ಬರಿಗೂ ದೃಷ್ಟಿ ನೀಡುವ ಕೆಲಸ ಮಾಡಲಾಗುವುದು.‌ ಜತೆಗೆ ಮುಂದಿನ ದಿನಗಳಲ್ಲಿ ಬಡವರ ಆರೋಗ್ಯವನ್ನು ಸುಧಾರಣೆ ಮಾಡುವ ನಿಟ್ಟಿನಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಇಡೀ ರಾಜ್ಯದಲ್ಲಿ ವಿವಿಧ ಆರೋಗ್ಯ ಸೇವೆಗಳನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ಆರೋಗ್ಯ ಸಚಿವ ಶ್ರೀರಾಮುಲು ಹೇಳಿದರು. ಪರಿವಾರ ಸಮುದಾಯ ಅಭಿವೃದ್ಧಿ ಟ್ರಸ್ಟ್‌, […]