3 ವರ್ಷ ಕಳೆದರೂ ಈ ರಸ್ತೆಯಲ್ಲಿ ಕಾಣಲು ಸಿಗದು ಹೊಂಡ-ಗುಂಡಿ: ಉಡುಪಿ ಜಿಲ್ಲೆಯ ಪ್ಲಾಸ್ಟಿಕ್ ರಸ್ತೆ ಪ್ರಯೋಗ ಯಶಸ್ವಿ

ಉಡುಪಿ: ಸಾರ್ವಜನಿಕರ ದೈನಂದಿನ ಜೀವನದಲ್ಲಿ ಹಾಸುಹೊಕ್ಕಿರುವ ಪ್ಲಾಸ್ಟಿಕ್ ನ ಬಳಕೆಯ ನಂತರ, ಅದರ ತ್ಯಾಜ್ಯ ವಿಲೇವಾರಿ ಸಮಸ್ಯೆ ಎಲ್ಲೆಡೆ ಕಂಡುಬರುತ್ತಿದೆ. ಪ್ಲಾಸ್ಟಿಕ್ ನಿಂದ ಉಂಟಾಗುವ ದುಷ್ಪರಿಣಾಮಗಳನ್ನು ತಡೆಗಟ್ಟಬೇಕಾದ ಬೃಹತ್ ಸಮಸ್ಯೆಯೂ ನಮ್ಮ ಮುಂದಿದೆ. ಪ್ಲಾಸ್ಟಿಕ್ ಅನ್ನು ಒಂದು ತ್ಯಾಜ್ಯವೆಂದು ಪರಿಗಣಿಸುವ ಬದಲಿಗೆ ಅದನ್ನು ಸೂಕ್ತ ರೀತಿಯಲ್ಲಿ ಮರುಬಳಕೆ ಮಾಡಿದರೆ ಅದು ಒಂದು ಸಂಪನ್ಮೂಲವಾಗುತ್ತದೆ ಎಂಬುದಕ್ಕೆ ಉಡುಪಿ ಜಿಲ್ಲೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ನಿರ್ಮಿಸಿದ ರಸ್ತೆ ಸಾಕ್ಷಿಯಾಗಿದೆ. ಪ್ಲಾಸ್ಟಿಕ್ ತ್ಯಾಜ್ಯದ ಮರುಬಳಕೆ ಕುರಿತಂತೆ 2019 ರ ಡಿಸೆಂಬರ್ 10 ರಂದು […]

ವಿನೂತನ ಕಾಂಪೋಸ್ಟ್ ಬೆಡ್ ನಿರ್ಮಿಸಿ ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಯ್ತು ಉಡುಪಿ ಜಿಲ್ಲಾಧಿಕಾರಿ ವಸತಿಗೃಹ

ಉಡುಪಿ: ತ್ಯಾಜ್ಯ ವಿಲೇವಾರಿಯಲ್ಲಿ ರಾಜ್ಯಕ್ಕೆ ಮಾದರಿಯಾಗುವಂತಹ ಯೋಜನೆಗಳನ್ನು ರೂಪಿಸಿ ಅವುಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿರುವ ಜಿಲ್ಲೆಯೆಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಉಡುಪಿ ಜಿಲ್ಲೆಯು ಪ್ರಸ್ತುತ ಮತ್ತೊಂದು ವಿನೂತನ ಸ್ವಚ್ಛತಾ ಕಾರ್ಯಕ್ರಮದ ಪ್ರಾಯೋಗಿಕ ಯೋಜನೆಗೆ ಜಿಲ್ಲಾಧಿಕಾರಿಗಳ ವಸತಿಗೃಹ ಸಾಕ್ಷಿಯಾಗಿದೆ. ಮನೆಯ ಕಾಂಪೌಂಡ್ ನಲ್ಲಿ ಬೀಳುವ ಒಣಕಸವನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಣೆ ಮಾಡುವ ವಿಧಾನವನ್ನು ಉಡುಪಿ ಜಿಲ್ಲಾಧಿಕಾರಿಗಳ ವಸತಿಗೃಹದಲ್ಲಿ ಪ್ರಾಯೋಗಿಕವಾಗಿ ಅನುಷ್ಠಾನ ಮಾಡಿದ್ದು, ವಸತಿಗೃಹದಲ್ಲಿನ ಕೈ ತೋಟದ ಒಣ ಹುಲ್ಲು, ತೋಟದ ಗಿಡಗಳಿಂದ ಬಿದ್ದಿದ್ದ ಗಿಡದ ಎಲೆಗಳು, ಮರದ ಮೇಲಿಂದ ಬಿದ್ದ […]

ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ರಾಜ್ಯದಲ್ಲೇ ಅಗ್ರಸ್ಥಾನ ಪಡೆದ ಉಡುಪಿ; ಸ್ವಚ್ಛತಾ ಸೇನಾನಿಗಳ ಪಾತ್ರ ಅನನ್ಯ : ಪ್ರಸನ್ನ ಹೆಚ್

ಉಡುಪಿ: ಗ್ರಾಮೀಣ ಪ್ರದೇಶದ ಸ್ವಚ್ಛತೆಯಲ್ಲಿ ಉಡುಪಿ ಜಿಲ್ಲೆಯು ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದಿದ್ದು, ಈ ಸ್ಥಾನ ಪಡೆಯುವಲ್ಲಿ ಜಿಲ್ಲೆಯ ಗ್ರಾಮೀಣ ಭಾಗದ ಸ್ವಚ್ಛತಾ ಸೇನಾನಿಗಳ ಪಾತ್ರ ಅತ್ಯಂತ ಮಹತ್ವವಾಗಿದ್ದು, ಜಿಲ್ಲೆಯ ಈ ಸಾಧನೆಯನ್ನು ನಿರಂತರವಾಗಿ ಮುಂದುವರೆಸುವಂತೆ ಗ್ರಾಮೀಣ ಸ್ವಚ್ಛತಾ ಕಾರ್ಯಕರ್ತರಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಬುಧವಾರ ಜಿಲ್ಲಾ ಪಂಚಾಯತ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಇವರ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಸ್ವಚ್ಛ […]

ಗ್ರಾಮಪಂಚಾಯತ್ ತೆರಿಗೆ ಪಾವತಿಗೆ ಡಿಜಿಟಲ್ ವ್ಯವಸ್ಥೆ ಕಡ್ಡಾಯ: ಪ್ರಸನ್ನ ಹೆಚ್

ಉಡುಪಿ: ಸಾರ್ವಜನಿಕರು ಗ್ರಾಮ ಪಂಚಾಯತ್‌ಗಳಿಗೆ ವಿವಿಧ ತೆರಿಗೆ, ಶುಲ್ಕ ಸೇರಿದಂತೆ ಮತ್ತಿತರ ದರಗಳನ್ನು ಶನಿವಾರದಿಂದ ಕಡ್ಡಾಯವಾಗಿ ಡಿಜಿಟಲ್ ವ್ಯವಸ್ಥೆಯ ಮೂಲಕ ಪಾವತಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್ ತಿಳಿಸಿದರು. ಅವರು ಉಡುಪಿ ತಾಲೂಕಿನ ಕಲ್ಯಾಣಪುರ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಗ್ರಾಮ ಪಂಚಾಯತ್‌ಗಳಲ್ಲಿ ನಗದು ರಹಿತ ವ್ಯವಹಾರಕ್ಕೆ ಚಾಲನೆ ನೀಡಿ ಮಾತನಾಡುತ್ತಿದ್ದರು. ಜನ ಸಾಮಾನ್ಯರು ವಿವಿಧ ತೆರಿಗೆಗಳು, ಶುಲ್ಕಗಳು, ದರಗಳನ್ನು ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳಿಗೆ ನಗದು ರಹಿತವಾಗಿ ಪಾವತಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದೆ. ಸಾರ್ವಜನಿಕರು ನಗದು […]

ಬೆಂದಕಾಳೂರೆಂಬ ಹಳ್ಳಿಯನ್ನು ನಗರವನ್ನಾಗಿಸಿದ ಕೀರ್ತಿ ಕೆಂಪೇಗೌಡರಿಗೆ ಸಲ್ಲುತ್ತದೆ: ಪ್ರಸನ್ನ ಹೆಚ್

ಉಡುಪಿ: ಮಣ್ಣಿನ ಕೋಟೆಯಿಂದ ಕಟ್ಟಿದ ಹಳ್ಳಿ ಪ್ರದೇಶವಾಗಿದ್ದ ಬೆಂದಕಾಳೂರನ್ನು ನಗರವಾಗಿ ನಿರ್ಮಿಸಿದ ನಿರ್ಮಾತೃ ನಾಡಪ್ರಭು ಕೆಂಪೇಗೌಡ ಅವರಿಂದ, ಬೆಂಗಳೂರು ನಗರ ಇಂದು ದೇಶ-ವಿದೇಶಿಗರಿಗೆ ಚಿರಪರಿಚಿತವಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್. ಹೇಳಿದರು. ಅವರು ಇಂದು ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಸಹಯೋಗದಲ್ಲಿ ನಡೆದ ನಾಡಪ್ರಭು ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಕೆಂಪೇಗೌಡರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು. ಕೆಂಪೇಗೌಡರು ಶೌರ್ಯ, ಸಾಹಸ, […]