ಸಂಸತ್ತಿನಲ್ಲಿ ಭದ್ರತಾ ಲೋಪ: 6 ಬಂಧನ; ಆರೋಪಿಗಳ ಮೇಲೆ ಯುಎಪಿಎ ದಾಖಲು

ನವದೆಹಲಿ: ಸಂಸತ್ತಿನ ಲೋಕಸಭೆಯಲ್ಲಿ ಬುಧವಾರದಂದು ಇಬ್ಬರು ವ್ಯಕ್ತಿಗಳು ವೀಕ್ಷಕರ ಗ್ಯಾಲರಿಯಿಂದ ಕೆಳಮನೆಗೆ ಧುಮುಕಿ ಹೊಗೆ ಕ್ಯಾನ್ ಗಳನ್ನು ಸಿಡಿಸಿ ರಂಪಾಟ ಮಾಡಿದ್ದು, ಸದನದಲ್ಲಿದ್ದ ಸಂಸದರೆಲ್ಲರೂ ಅವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ಬಳಿಕ ತನಿಖೆ ಮುಂದುವರೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 6 ಜನರನ್ನು ಬಂಧಿಸಲಾಗಿದೆ. ರಂಪಾಟ ನಡೆಸಿದವರು ಮೈಸೂರು ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರ ಹೆಸರಿನಲ್ಲಿ ಪಾಸ್ ಪಡೆದುಕೊಂಡು ಲೋಕಸಭೆಯ ಸದನದೊಳಗೆ ಪ್ರವೇಶಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ. ಪ್ರಕರಣದಲ್ಲಿ ಒಟ್ಟು ಏಳು ಮಂದಿ ಭಾಗಿಯಾಗಿದ್ದು, ತಲೆಮರೆಸಿಕೊಂಡಿರುವ ಏಳನೇ […]

ಇತಿಹಾಸ ಗೊತ್ತಿದ್ದಾಗ ಮಾತ್ರ ಇತಿಹಾಸ ಸೃಷ್ಟಿಸಲು ಸಾಧ್ಯ : ಪ್ರತಾಪ್ ಸಿಂಹ

ಉಡುಪಿ: ಇತಿಹಾಸ ಗೊತ್ತಿದ್ದಲ್ಲಿ ಮಾತ್ರ ಇತಿಹಾಸವನ್ನು ಸೃಷ್ಠಿಸಲು ಸಾಧ್ಯ. ದೇಶದ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ಪ್ರತಿಯೊಬ್ಬರು ತಿಳಿಯುವುದರೊಂದಿಗೆ ದೇಶ ಪ್ರೇಮವನ್ನು ಹಾಗೂ ದೇಶಾಭಿಮಾನವನ್ನು ಬೆಳೆಸಿಕೊಂಡು ನಾವು ಪಡೆದಿರುವ ಸಾತಂತ್ರ್ಯವನ್ನು ಉಳಿಸಿಕೊಂಡು ಹೋಗಬೇಕಿದೆ ಎಂದು ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ಹೇಳಿದರು. ಶನಿವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಅಜ್ಜರಕಾಡಿನ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಅಮೃತ ಭಾರತಿಗೆ ಕನ್ನಡದಾರತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. […]