ಸಮಾಜಮುಖಿ ಬದುಕಿನ ನಿರ್ಮಾಣವೇ ಶಿಕ್ಷಣದ ಉದ್ದೇಶ: ಬಿ.ಎಮ್. ಸುಕುಮಾರ

ಕುಂದಾಪುರ: ಸಮಾಜಮುಖಿ ಬದುಕಿನ ನಿರ್ಮಾಣವೇ ಶಿಕ್ಷಣದ ಉದ್ದೇಶ ಹೊರತು ಅಂಕಗಳಿಕೆ-ಉದ್ಯೋಗ ಸಂಪಾದನೆ ಅಲ್ಲ. ವಿದ್ಯಾರ್ಥಿಗಳನ್ನು ಕೇವಲ ತರಗತಿಯ ನಾಲ್ಕು ಗೋಡೆಗಳಿಗೆ ಸೀಮಿತವಾಗಿರಿಸದೆ, ಸಮಾಜದ ಮುಖ್ಯ ವಾಹಿನಿಗೆ ಪರಿಚಯಿಸುವಲ್ಲಿ ಶಿಕ್ಷಕ ಹಾಗೂ ವಿದ್ಯಾಸಂಸ್ಥೆಯ ಪಾತ್ರ ಅಗಾಧ ಎಂದು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷ ಬಿ.ಎಮ್. ಸುಕುಮಾರ ಶೆಟ್ಟಿ ಹೇಳಿದರು. ಇಲ್ಲಿನ ಡಾ. ಬಿ.ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ‘ಪ್ರತಿಭಾ ದಿನಾಚರಣೆ’ಯ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸಮಾಜ ಪರ […]