ಸುರತ್ಕಲ್ ಟೋಲ್ ಎತ್ತಂಗಡಿ: ಉದ್ಯೋಗ ಕಳಕೊಂಡ ಕಾರ್ಮಿಕರಿಗೆ ಸಹಾಯ ಹಸ್ತ ಚಾಚಿದ ಪ್ರತಿಭಾ ಕುಳಾಯಿ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗದಲ್ಲಿದ್ದು ಟೋಲ್ ತೆರವುಗೊಂಡ ಹಿನ್ನೆಲೆಯಲ್ಲಿ ಉದ್ಯೋಗ ಕಳೆದುಕೊಂಡಿರುವ 35 ಮಂದಿಗೆ ಕೆಲಸ ನೀಡುವುದಾಗಿ ಹೇಳಿದ್ದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಅವರು ತಮ್ಮನ್ನು ಸಂಪರ್ಕಿಸಿದ 19 ಮಂದಿಯಲ್ಲಿ ಹೆಚ್ಚಿನ ಯುವಕ ಯುವತಿಯರಿಗೆ ಉದ್ಯೋಗ ಕಲ್ಪಿಸುವ ಮೂಲಕ ಶ್ಲಾಘನೆಗೆ ಪಾತ್ರರಾಗಿದ್ದಾರೆ. ಈ ಕುರಿತು ಫೇಸ್ ಬುಕ್ ಪೋಸ್ಟ್ ಹಾಕಿರುವ ಪ್ರತಿಭಾ ಕುಳಾಯಿ ಅವರು, ಸುರತ್ಕಲ್ ಟೋಲ್ ಗೇಟ್ ನಲ್ಲಿ ಉದ್ಯೋಗ ಕಳೆದುಕೊಂಡ 35 ಮಂದಿಯನ್ನು ನಾನು ಭೇಟಿಯಾಗಿ ಅವರಿಗೆ ಅವರ ವಿದ್ಯಾರ್ಹತೆಗೆ […]

ಅಕ್ರಮ ಟೋಲ್ ಗೇಟ್ ವಿರೋಧಿಸಿ ಅಹೋರಾತ್ರಿ ಅನಿರ್ದಿಷ್ಟಾವಧಿ ಧರಣಿ

ಸುರತ್ಕಲ್: ಅಕ್ರಮ ಟೋಲ್ ಗೇಟ್ ವಿರುದ್ಧ ಟೋಲ್ ವಿರೋಧಿ ಹೋರಾಟ ಸಮಿತಿ ಶುಕ್ರವಾರದಿಂದ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಪ್ರತಿಭಟನೆ ಆರಂಭಿಸಿದ್ದು, ಮುಂಜಾನೆಯೆ ಟೋಲ್ ಗೇಟ್ ಬಳಿ ಹೋರಾಟ ಸಮಿತಿ ಮುಖಂಡರು ಮತ್ತು ಸದಸ್ಯರು ಧರಣಿ ಕೂತಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಕೆಪಿಸಿಸಿ ಸಂಯೋಜಕಿ ಪ್ರತಿಭಾ ಕುಳಾಯಿ ಸಂಸದ ನಳಿನ್ ಕುಮಾರ್ ಕಟೀಲ್ ಮೇಲೆ ಜಿಲ್ಲೆಯ ಜನರು ವಿಶ್ವಾಸ ಕಳೆದುಕೊಂಡಿದ್ದಾರೆ. ಏಳು ವರ್ಷಗಳಿಂದ ಟೋಲ್ ತೆರವಿಗೆ ದಿನಾಂಕ ಮುಂದೂಡುತ್ತಲೇ ಬಂದಿದ್ದಾರೆ. ಈಗ ನವೆಂಬರ್ 9 ಗಡುವು ನೀಡಿದ್ದಾರೆ. ಆದರೆ […]

ಪ್ರತಿಭಾ ಕುಳಾಯಿ ಮಾನಹಾನಿಕರ ಪೋಸ್ಟ್ ಪ್ರಕರಣ: ಎರಡನೇ ಆರೋಪಿ ನ್ಯಾಯಾಲಯಕ್ಕೆ ಹಾಜರ್

ಮಂಗಳೂರು: ಕಾಂಗ್ರೆಸ್ ನಾಯಕಿ, ಸಾಮಾಜಿಕ ಹೋರಾಟಗಾರ್ತಿ ಪ್ರತಿಭಾ ಕುಳಾಯಿ ಅವರ ವಿರುದ್ದ ಸಾಮಾಜಿಕ ಜಾಲತಾಣಗಳಲ್ಲಿ ಮಾನಹಾನಿಕರ ಪೋಸ್ಟ್ ಹಾಕಿದ ಪ್ರಕರಣದಲ್ಲಿ ಎರಡನೇ ಆರೋಪಿ ಅಡ್ಯಾರ್ ಪದವು ನಿವಾಸಿ ಕೆ.ಆರ್.ಶೆಟ್ಟಿ ಗುರುವಾರದಂದು ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ತನ್ನ ವಕೀಲರ ಜೊತೆ ನ್ಯಾಯಾಲಯಕ್ಕೆ ಹಾಜರಾಗಿರುವ ಆತನನ್ನು ನ್ಯಾಯಾಲಯವು ಒಂದು ದಿನದ ಮಟ್ಟಿಗೆ ಪೊಲೀಸ್ ವಶಕ್ಕೊಪ್ಪಿಸಿದೆ. ಶೆಟ್ಟಿ ಪೋಸ್ಟ್ ಮಾಡಿದ ಪೋಸ್ಟ್ ಗೆ ಶ್ಯಾಮ್ ಸುದರ್ಶನ್ ಭಟ್ ಎನ್ನುವವರು ಅಸಭ್ಯ ಟಿಪ್ಪಣಿಯನ್ನು ಬರೆದಿದ್ದು, ಆತ ತಲೆಮರೆಸಿಕೊಂಡಿದ್ದಾನೆ ಎನ್ನಲಾಗಿದೆ. ಪೊಲೀಸರು ನಾಲ್ಕು ತಂಡಗಳನ್ನು ರಚಿಸಿ […]

ಪ್ರತಿಭಾ ಕುಳಾಯಿ ಘನತೆಗೆ ಧಕ್ಕೆ ತಂದವರ ವಿರುದ್ದ ಮಾನಹಾನಿ ಪ್ರಕರಣ ದಾಖಲು

ಮಂಗಳೂರು: ಸಾಮಾಜಿಕ ಕಾರ್ಯಕರ್ತೆ ಮತ್ತು ಕಾಂಗ್ರೆಸ್ ಪಕ್ಷದ ಸಂಯೋಜಕಿ ಪ್ರತಿಭಾ ಕುಳಾಯಿ ಅವರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಸಭ್ಯವಾಗಿ ಬರೆದು ಅವರ ಘನತೆಗೆ ಧಕ್ಕೆ ತಂದ ವ್ಯಕ್ತಿಯ ಬಂಧನಕ್ಕೆ ಎರಡು ತಂಡ ರಚಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ತಿಳಿಸಿದ್ದಾರೆ. ಸುರತ್ಕಲ್ ಟೋಲ್ ಗೇಟ್ ವಿರುದ್ಧ ಪ್ರತಿಭಟನೆಯಲ್ಲಿ ತೊಡಗಿಕೊಂಡಿದ್ದ ಸಂದರ್ಭದಲ್ಲಿ ಪ್ರತಿಭಾ ಅವರ ವೀಡಿಯೋ ಚಿತ್ರಗಳನ್ನು ಸಂಕಲನ ಮಾಡಿ ಅದನ್ನು ಅಸಭ್ಯ ರೀತಿಯಲ್ಲಿ ಚಿತ್ರಿಸಿ ಸಾಮಾಜಿಕ ಜಾಲತಾಣಗಳಲ್ಲಿ […]

ಅಸಭ್ಯ ರೀತಿ ವೀಡೀಯೋ ಎಡಿಟ್ ಮಾಡಿದವರ ವಿರುದ್ದ ಸೂಕ್ತ ಕ್ರಮಕ್ಕೆ ಆಗ್ರಹಿಸಿದ ಪ್ರತಿಭಾ ಕುಳಾಯಿ

ಮಂಗಳೂರು: ಅ.18 ರಂದು ಸಾಮಾಜಿಕ ಜಾಲತಾಣದಲ್ಲಿ ತನ್ನ ಅಸಹ್ಯ ಮತ್ತು ಅಸಭ್ಯ ರೀತಿಯಲ್ಲಿ ಚಿತ್ರಿಸಿದ ಭಾವಚಿತ್ರಕ್ಕೆ ಕಮೆಂಟ್ ಮಾಡಿ ಎಂದು ಹರಿಯಬಿಟ್ಟ ಕೆ.ಟಿ ಶೆಟ್ಟಿ ಎಂಬವರ ವಿರುದ್ದ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಮಾಜಿ ಕಾರ್ಪೋರೇಟರ್ ಪ್ರತಿಭಾ ಕುಳಾಯಿ ಮಂಗಳೂರು ಪೊಲೀಸ್ ಆಯುಕ್ತರಲ್ಲಿ ಮನವಿ ಮಾಡಿದ್ದಾರೆ. ಅ18 ರಂದು ಸುರತ್ಕಲ್ ಅಕ್ರಮ ಟೋಲ್ ಗೇಟ್ ಮುತ್ತಿಗೆ ಪ್ರತಿಭಟನಾ ಸಂದರ್ಭದಲ್ಲಿ ಆರಕ್ಷಕ ಅಧಿಕಾರಿಗಳು ತಮ್ಮನ್ನು ಬಂಧಿಸಲು ಬಂದಿದ್ದು, ಆ ಸಂದರ್ಭದಲ್ಲಿ ಬಂಧನದ ವಿರುದ್ದ ಸಾರ್ವಜನಿಕವಾಗಿ ಪ್ರತಿಭಟಿಸಿದ್ದು, ಆಗ ಅಲ್ಲಿದ್ದ […]