ಜೂನ್ 30ರೊಳಗೆ ಶರಣಾಗಿ; ಇಲ್ಲದಿದ್ದರೆ ಮನೆ ಜಪ್ತಿಗೆ ತಯಾರಾಗಿ: ಪ್ರವೀಣ್ ನೆಟ್ಟಾರು ಹತ್ಯೆಗೈದ ಆರೋಪಿಗಳಿಗೆ ಎನ್.ಐ.ಎ ವಾರ್ನಿಂಗ್

ಸುಳ್ಯ: ಪ್ರವೀಣ್‌ ನೆಟ್ಟಾರು ಹತ್ಯೆ ಆರೋಪಿಗಳು ಸ್ವಯಂ ಪ್ರೇರಿತವಾಗಿ ಜೂನ್‌.30ರೊಳಗೆ ಹಾಜರಾಗಬೇಕು ಎಂದು ಎನ್‌ಐಎ ಕೋರ್ಟ್‌ ಆದೇಶ ಹೊರಡಿಸಿದೆ. ಒಂದು ವೇಳೆ ಜೂನ್‌.30ರೊಳಗೆ ಶರಣಾಗದಿದ್ದಲ್ಲಿ ಆರೋಪಿಗಳ ಆಸ್ತಿಯನ್ನು ಜಪ್ತಿ ಮಾಡಲಾಗುವುದು ಎಂದು ಎನ್‌ಐಎ ಕೋರ್ಟ್‌ ಹೇಳಿದೆ. ಈ ಬಗ್ಗೆ ಸುಳ್ಯದಲ್ಲಿ ಧ್ವನಿವರ್ಧಕದ ಮೂಲಕ ಸಂದೇಶ ನೀಡಲಾಗಿದೆ. ಪ್ರವೀಣ್ ನೆಟ್ಟಾರು ಬರ್ಬರ ಹತ್ಯೆ ಮಾಡಿದ ಆರೋಪಿಗಳ ಸುಳಿವು ಕೊಟ್ಟವರಿಗೆ ನಗದು ಬಹುಮಾನ ನೀಡುವುದಾಗಿಯೂ ಘೋಷಿಸಲಾಗಿದೆ. 2022ರ ಜುಲೈ 26ರಂದು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದಲ್ಲಿ […]

ಮಂಗಳೂರು: ಪಿಎಫ್‌ಐ, ಎಸ್‌ಡಿಪಿಐ ಕಚೇರಿಗಳ ಮೇಲೆ ಎನ್‌ಐಎ ದಾಳಿ

ಮಂಗಳೂರು: ಇಲ್ಲಿನ ಪಿ.ಎಫ್.ಐ, ಎಸ್.ಡಿಪಿ.ಐ ಸಂಘಟನೆಗಳ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆಯ (ಎನ್‌ಐಎ) ಅಧಿಕಾರಿಗಳು ದಾಳಿ ನಡೆಸಿದ್ದಾರೆ ಎಂದು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ. ಭಯೋತ್ಪಾದಕ ಗುಂಪುಗಳನ್ನು ಬೆಂಬಲಿಸುವ ಜನರ ವಿರುದ್ಧ ಸಂಸ್ಥೆಯ ರಾಷ್ಟ್ರವ್ಯಾಪಿ ಶೋಧದ ಭಾಗವಾಗಿ ಗುರುವಾರ ಬೆಳಿಗ್ಗೆ ಈ ದಾಳಿ ನಡೆಸಲಾಗಿದೆ. ಎರಡೂ ಸಂಘಟನೆಗಳ ಕಚೇರಿಗಳ ಮೇಲೆ ಏಕಕಾಲದಲ್ಲಿ ದಾಳಿ ನಡೆಸಲಾಗಿದೆ. ಬಜ್ಪೆ, ನೆಲ್ಲಿಕಾಯಿ ಮಾರ್ಗ, ಕುಳಾಯಿ ಮತ್ತು ಕಾವೂರಿನಲ್ಲಿ ಎನ್.ಐ.ಎ ದಾಳಿ ನಡೆಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿ ವೇಳೆ […]

ಪ್ರವೀಣ್ ಹತ್ಯೆ ಪ್ರಕರಣ ಎನ್.ಐ.ಎ ಗೆ ಹಸ್ತಾಂತರ: ಸಿಎಂ ಬೊಮ್ಮಾಯಿ

ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣವನ್ನ ಎನ್.ಐ.ಎಗೆ ಹಸ್ತಾಂತರ ಮಾಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಪ್ರವೀಣ್ ಹತ್ಯೆ ಪ್ರಕರಣ ಸಂಬಂಧ ಡಿಜಿ ಐಜಿಪಿ ಪ್ರವೀಣ್ ಸೂದ್ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಂಡಿರೋದಾಗಿ ಬೊಮ್ಮಾಯಿ‌ ಹೇಳಿದ್ದಾರೆ. ಪ್ರವೀಣ್ ಹತ್ಯೆ ಕೇಸ್ ವ್ಯವಸ್ಥಿತ ಸಂಚು, ಪ್ರಕರಣದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ಪ್ರಕರಣದ ತನಿಖೆ ತ್ವರಿತಗತಿಯಲ್ಲಿ ನಡೆಯುತ್ತಿದೆ. ಪ್ರಕರಣ ಎರಡು ರಾಜ್ಯಕ್ಕೆ ಸಂಬಂಧಿಸಿದ್ದಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್ .ಐ.ಎ ಗೆ ಪತ್ರ ಬರೆಯಲು ಹೇಳಿದ್ದೇನೆ. ಪ್ರಕರಣವನ್ನ ಎನ್ ಐ […]

ಉಡುಪಿ: ಜು.30 ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಶೃದ್ಧಾಂಜಲಿ ಸಭೆ

ಉಡುಪಿ: ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ರಂದು ಶನಿವಾರ ಬೆಳಿಗ್ಗೆ 10.30 ಗಂಟೆಗೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ […]

ಪ್ರಚೋದನಕಾರಿ ಭಾಷಣಗಳು ಅಮಾಯಕರ ಕೊಲೆಗೆ ಕಾರಣ: ರಮಾನಾಥ್ ರೈ

ಮಂಗಳೂರು: ಪ್ರಚೋದನಕಾರಿ ಭಾಷಣಗಳಿಂದ ಅಮಾಯಕರ ಕೊಲೆಗಳು ನಡೆದಿವೆ, ಇದರಿಂದ ಜಿಲ್ಲೆಯಲ್ಲಿ ಅಶಾಂತಿಯ ವಾತಾವರಣ ನಿರ್ಮಾಣವಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದವರು ಗಲಭೆಗಳ ಹಿಂದೆ ಇರುತ್ತಾರೆ. ಇಂತಹ ಪ್ರಕರಣ ನಡೆದಾಗ ಅಮಾಯಕರು ಬಲಿಯಾಗುತ್ತಾರೆ. ಹಣ ಹಾಗೂ ಅಧಿಕಾರಕ್ಕಾಗಿ ಪ್ರಚೋದನೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಂಡರೆ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಸಾಧ್ಯ. ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಪ್ರಕರಣದಲ್ಲಿ ಸರಕಾರ ನಿರ್ಲಕ್ಯ ವಹಿಸಿರುವುದು ಖಂಡನೀಯ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗು ಇಬ್ಬರ ಕುಟುಂಬಕ್ಕೂ ಯಾವುದೇ ತಾರತಮ್ಯ ಮಾಡದೆ […]