ಪ್ರವೀಣ್ ಹತ್ಯೆ ಹಿನ್ನೆಲೆ: ಶಂಕಿತ ಏಳು ಎಸ್.ಡಿ.ಪಿ.ಐ ಕಾರ್ಯಕರ್ತರು ವಶಕ್ಕೆ
ಸುಳ್ಯ: ಹಿಂದೂ ಕಾರ್ಯಕರ್ತ, ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಏಳು ಎಸ್.ಡಿ.ಪಿ.ಐ ಕಾರ್ಯಕರ್ತರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಶಂಕೆಯ ಹಿನ್ನಲೆಯಲ್ಲಿ ಏಳು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ನ್ಯೂಸ್ 18 ವರದಿ ಮಾಡಿದೆ. ತಡರಾತ್ರಿ ಕಾರ್ಯಕರ್ತರ ಮನೆಗೆ ಆಗಮಿಸಿದ ಪೊಲೀಸರು ಎಳು ಜನರನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ. ವಶಕ್ಕೆ ಪಡೆದ ಎಲ್ಲಾ ಏಳು ಕಾರ್ಯಕರ್ತರು ಬೆಳ್ಳಾರೆ ಪರಿಸರದ ನಿವಾಸಿಗಳು ಎಂದು ತಿಳಿದು ಬಂದಿದೆ. […]
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಹಂತಕರನ್ನು ಎನ್ಕೌಂಟರ್ ಮಾಡಲು ಆಗ್ರಹಿಸಿದ ಕುಯಿಲಾಡಿ; ಜಿಹಾದಿಗಳಿಗೆ ಅವರದ್ದೇ ಭಾಷೆಯಲ್ಲಿ ಉತ್ತರಿಸಿ ಎಂದ ಯಶಪಾಲ್ ಸುವರ್ಣ
ಉಡುಪಿ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿ […]
ಬೆಳ್ಳಾರೆ ಉದ್ವಿಗ್ನ: ನಳಿನ್ ಕುಮಾರ್ ಕಟೀಲ್ ಕಾರಿಗೆ ಮುತ್ತಿಗೆ; ಸಾರ್ವಜನಿಕರಿಂದ ಕಲ್ಲು ತೂರಾಟ, ಪೊಲೀಸರಿಂದ ಲಾಠಿ ಚಾರ್ಜ್
ಸುಳ್ಯ: ನಿನ್ನೆ ತಡರಾತ್ರಿ ಬಿಜೆಪಿ ಯುವ ಮೋರ್ಚಾದ ಮುಖಂಡ ಪ್ರವೀಣ್ ನೆಟ್ಟಾರೆ ಅವರ ಬರ್ಬರ ಹತ್ಯೆ ನಡೆದಿದ್ದು ಹತ್ಯೆ ಮಾಡಿದ ದುಷ್ಕರ್ಮಿಗಳನ್ನು ಶೀಘ್ರ ಬಂಧಿಸಿ ಶಿಕ್ಷಿಸುವ ಭರವಸೆ ನೀಡಿದ್ದರೂ ಸಾರ್ವಜನಿಕರ ಆಕ್ರೋಶ ಮಾತ್ರ ತಣ್ಣಗಾಗಿಲ್ಲ. ಘಟನೆಯ ಬಳಿಕ ಸುದ್ದಿ ತಿಳಿದ ಸಂಸದ, ಸಚಿವರು, ಶಾಸಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಈ ಸಂದರ್ಭ ಜನತೆಯ ಮಡುಗಟ್ಟಿದ ಆಕ್ರೋಶ ಕಾರಿಗೆ ಮುತ್ತಿಗೆ ಹಾಕುವ ರೂಪದಲ್ಲಿ ವ್ಯಕ್ತವಾಗಿದೆ. ಸಂಸದ ನಳಿನ್ ಕುಮಾರ್, ಸಚಿವ ಸುನಿಲ್ ಕುಮಾರ್ ಮತ್ತು ಸ್ಥಳೀಯ ಶಾಸಕರ ಕಾರಿಗೆ ಮುತ್ತಿಗೆ […]