ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಹಚ್ಚುವುದು ಕಾನೂನಿನ ಅಡಿಯಲ್ಲಿ ಅಪರಾಧ: ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ

ಉಡುಪಿ: ಗರ್ಭ ಪೂರ್ವ ಹಾಗೂ ಪ್ರಸವ ಪೂರ್ವ ಭ್ರೂಣ ಲಿಂಗ ಪತ್ತೆ ಮಾಡುವುದು ಕಾನೂನಿನ ಅಡಿಯಲ್ಲಿ ಅಪರಾಧ. ಇತ್ತೀಚಿನ ದಿನಗಳಲ್ಲಿ ಹೆಣ್ಣು ಹಾಗೂ ಗಂಡು ಮಕ್ಕಳ ಲಿಂಗಾನುಪಾತ ವ್ಯತ್ಯಾಸ ಉಂಟಾಗಿ ಸಮಾಜದಲ್ಲಿ ಗಂಭೀರ ಪರಿಣಾಮ ಉಂಟಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಹೇಳಿದರು. ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಕ್ಷಮ ಪ್ರಾಧಿಕಾರ ಪಿ.ಸಿ. […]