ಸೆ.15ರಂದು ಅಜ್ಜರಕಾಡು ಕ್ರೀಡಾಂಗಣದಲ್ಲಿ ಸಂವಿಧಾನ ಪೀಠಿಕೆ ಓದುವ ಕಾರ್ಯಕ್ರಮ: ವಿದ್ಯಾಕುಮಾರಿ

ಉಡುಪಿ: ಭಾರತದ ಸಂವಿಧಾನದ ತತ್ವಗಳನ್ನು ತಮ್ಮ ಜೀವನ ಮತ್ತು ಕರ್ತವ್ಯಗಳಲ್ಲಿ ಅಳವಡಿಸಿಕೊಂಡು ಪೀಠಿಕೆಗೆ ಬದ್ಧರಾಗುವ ಉದ್ದೇಶದಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಪ್ರಯುಕ್ತ ಸೆ.15ರಂದು ಬೆಳಗ್ಗೆ 10 ಗಂಟೆಗೆ ಜಿಲ್ಲೆಯಾದ್ಯಂತ ಸಂವಿಧಾನ ಪೀಠಿಕೆಯನ್ನು ಒಟ್ಟಾಗಿ ಓದುವ ಬೃಹತ್ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ವಿದ್ಯಾಕುಮಾರಿ.ಕೆ ಅವರು ತಿಳಿಸಿದರು. ಅವರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಭಾರತದ ಸಂವಿಧಾನದ ಪೀಠಿಕೆಯನ್ನು ಓದುವ ಜಿಲ್ಲಾ ಮಟ್ಟದ ಕಾರ್ಯಕ್ರಮವು ಉಡುಪಿಯ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ […]

ಶಾಲಾ-ಕಾಲೇಜು ವಿದ್ಯಾರ್ಥಿಗಳು ಪ್ರತಿದಿನ ಸಂವಿಧಾನದ ಪೀಠಿಕೆ ಓದಲು ಆದೇಶ: ಡಾ. ಎಚ್‌ಸಿ ಮಹದೇವಪ್ಪ

ಬೆಂಗಳೂರು: ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಪ್ರತಿದಿನ ವಿದ್ಯಾರ್ಥಿಗಳೆಲ್ಲರೂ ಸಂವಿಧಾನದ ಪೀಠಿಕೆ ಓದುವಂತೆ ಪೂರಕ ಆದೇಶ ನೀಡಲು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಎಚ್‌.ಸಿ ಮಹದೇವಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ವಿಕಾಸಸೌಧದಲ್ಲಿ ಗುರುವಾರದಂದು ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಸಚಿವರು, ಸಂವಿಧಾನದ ಪ್ರಸ್ತಾವನೆಯನ್ನು ಓದುವ ಮೂಲಕ‌ ಎಲ್ಲರೂ ಸಂವಿಧಾನದಲ್ಲಿ ಸೂಚಿತ ಮಾರ್ಗದಲ್ಲಿ ಕೆಲಸ ಮಾಡಲು ಸೂಚಿಸಿದರು. ಇದೇ ವೇಳೆ ರಾಜ್ಯದ ಎಲ್ಲಾ ಶಾಲೆ ಕಾಲೇಜು ಮತ್ತು ವಿಶ್ವವಿದ್ಯಾಲಯದಲ್ಲಿ ಪ್ರತಿದಿನ ಸಂವಿಧಾನದ ಪ್ರಸ್ತಾವನೆಯನ್ನು ವಿದ್ಯಾರ್ಥಿಗಳಿಂದ ಓದಿಸುವುದಕ್ಕೆ ಪೂರಕ ಆದೇಶ ಹೊರಡಿಸಲು […]

ಸಂವಿಧಾನದ ಪೀಠಿಕೆಯಿಂದ ಸಮಾಜವಾದ ಮತ್ತು ಜಾತ್ಯತೀತತೆ ಪದ ಅಳಿಸಲು ಸುಬ್ರಮಣಿಯನ್ ಸ್ವಾಮಿ ಅರ್ಜಿ: ಸೆ.23 ರಂದು ಸುಪ್ರೀಂ ಕೋರ್ಟ್ ವಿಚಾರಣೆ

ನವದೆಹಲಿ: ಸಂವಿಧಾನದ ಪೀಠಿಕೆಯಿಂದ “ಸಮಾಜವಾದ” ಮತ್ತು “ಜಾತ್ಯತೀತತೆ” ಪದಗಳನ್ನು ಅಳಿಸಲು ಕೋರಿ ರಾಜ್ಯಸಭಾ ಸಂಸದ ಡಾ.ಸುಬ್ರಮಣಿಯನ್ ಸ್ವಾಮಿ ಅವರು ಸಲ್ಲಿಸಿದ ರಿಟ್ ಅರ್ಜಿಯು ಶುಕ್ರವಾರದಂದು ಸುಪ್ರೀಂ ಕೋರ್ಟ್‌ನಲ್ಲಿ ಪರಿಗಣನೆಗೆ ಬಂದಿದೆ. ನ್ಯಾಯಮೂರ್ತಿಗಳಾದ ಇಂದಿರಾ ಬ್ಯಾನರ್ಜಿ ಮತ್ತು ಎಂಎಂ ಸುಂದ್ರೇಶ್ ಅವರನ್ನೊಳಗೊಂಡ ಪೀಠವು ಸೆಪ್ಟೆಂಬರ್ 23 ರಂದು ಭಾರತದ ಮುಖ್ಯ ನ್ಯಾಯಮೂರ್ತಿಗಳ ಪೀಠದ ಮುಂದೆ ಪಟ್ಟಿ ಮಾಡಲಾದ ಇದೇ ರೀತಿಯ ಅರ್ಜಿಯೊಂದಿಗೆ ಡಾ.ಸ್ವಾಮಿ ಅವರ ಅರ್ಜಿಯನ್ನು ವಿಚಾರಣೆಗೆ ಎತ್ತಿಕೊಳ್ಳಲಿದೆ. ವಕೀಲ ಸತ್ಯ ಸಬರ್ವಾಲ್ ಪ್ರಕರಣದ ಎರಡನೇ ಅರ್ಜಿದಾರರಾಗಿದ್ದಾರೆ. 1976 […]