ಮಣಿಪಾಲ ಈಶ್ವರನಗರದಲ್ಲಿ ಕಾರು ಡಿಕ್ಕಿ ಹೊಡೆದು ಗರ್ಭಿಣಿ ಹಸು ಗಂಭೀರ: ಕಾರು ಚಾಲಕ ಪರಾರಿ

ಮಣಿಪಾಲ: ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಗರ್ಭಿಣಿ ಹಸುವೊಂದು ಗಂಭೀರವಾಗಿ ಗಾಯಗೊಂಡ ಘಟನೆ ಮಣಿಪಾಲದ ಈಶ್ವರ್ ನಗರದಲ್ಲಿ ರಾಷ್ಟ್ರೀಯ ಹೆದ್ದಾರಿ 169ಎ ರಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಹಸು ಹೆದ್ದಾರಿಯ ಬಲ ಬದಿಯಿಂದ ಎಡ ಕಡೆಗೆ ರಸ್ತೆ ದಾಟುತ್ತಿತ್ತು. ಈ ವೇಳೆ ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಕಾರು ಚಾಲಕನು ಅತೀ ವೇಗದಿಂದ ಕಾರನ್ನು ಚಲಾಯಿಸಿಕೊಂಡು ಹೋಗಿ ಹಸುವಿಗೆ ಡಿಕ್ಕಿ ಹೊಡೆದಿದ್ದಾನೆ. ಬಳಿಕ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಕಾರು ಡಿಕ್ಕಿಯಾದ ರಭಸಕ್ಕೆ ಹಸು 10 ಮೀಟರ್ […]