ಗರ್ಭಿಣಿಯರ ಆರೋಗ್ಯದ ಮೇಲೆ ಹೆಚ್ಚು ನಿಗಾ : ಚಿಕ್ಕಬಳ್ಳಾಪುರದಲ್ಲಿ ಝಿಕಾ ವೈರಸ್ ಪತ್ತೆ

ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಝಿಕಾ ವೈರಸ್ ಪತ್ತೆಯಾಗಿದೆ. ಆರೋಗ್ಯ ಇಲಾಖೆ ಈ ಕುರಿತು ಕಟ್ಟೆಚ್ಚರ ವಹಿಸುತ್ತಿದೆ.ಇತ್ತೀಚೆಗೆ ಕೇರಳದಲ್ಲಿ ಪತ್ತೆಯಾಗಿರುವ ಝಿಕಾ ವೈರಸ್ ಇದೀಗ ಚಿಕ್ಕಬಳ್ಳಾಪುರದಲ್ಲಿ ಕಂಡುಬಂದಿದೆ. ಇದಕ್ಕೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಇಲಾಖೆ ಸಿದ್ಧಪಡಿಸುತ್ತಿದೆ. ಈ ಗ್ರಾಮದ ವ್ಯಾಪ್ತಿಯಲ್ಲಿ ಸುಮಾರು 5,000ಕ್ಕೂ ಹೆಚ್ಚು ಜನ ವಾಸಿಸುತ್ತಿದ್ದು, ಆರೋಗ್ಯ ಇಲಾಖೆ ತಪಾಸಣೆಗೆ ಒಳಪಡಿಸಲಿದೆ. ಅದರಲ್ಲೂ ಮುಖ್ಯವಾಗಿ, ಗರ್ಭಿಣಿಯರು ಸೇರಿದಂತೆ ಇತರರ ಮೇಲೆ ಹೆಚ್ಚು ನಿಗಾ ವಹಿಸುತ್ತಿದೆ. ಜಿಲ್ಲೆಯ ನಾಗರಿಕರಲ್ಲಿ ಝಿಕಾ ಪ್ರಕರಣಗಳು ಪತ್ತೆಯಾಗಿಲ್ಲ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಮಹೇಶ್ ಸ್ಪಷ್ಟಪಡಿಸಿದ್ದಾರೆ.ಆರೋಗ್ಯ […]