ಜಿಲ್ಲೆಗೆ ಮುಖ್ಯಮಂತ್ರಿಗಳ ಭೇಟಿ ಪೂರ್ವಭಾವಿ ಸಭೆ

ಉಡುಪಿ: ರಾಜ್ಯದ ಮಾನ್ಯ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಅವರು ಏಪ್ರಿಲ್ 11 ರಂದು ಜಿಲ್ಲೆಗೆ ಭೇಟಿ ನೀಡುತ್ತಿದ್ದು, ಈ ಕುರಿತು ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಅಧ್ಯಕ್ಷತೆಯಲ್ಲಿ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್ಹಾಲ್‌ನಲ್ಲಿ ಪೂರ್ವಭಾವಿ ಸಭೆ ಏ.06 ರಂದು ನಡೆಯಿತು. ಮುಖ್ಯಮಂತ್ರಿಗಳು ಏಪ್ರಿಲ್ 11 ರಂದು ಬೆಳಗ್ಗೆ 12 ಗಂಟೆಗೆ ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಭೇಟಿ ನೀಡಲಿದ್ದು, ಮಧ್ಯಾಹ್ನ 2.30 ಕ್ಕೆ ಉಡುಪಿಯಲ್ಲಿ ಡಾ.ಬನ್ನಂಜೆ ಗೋವಿಂದಾಚಾರ್ಯ ಸ್ಮಾರಕ ಡಿಜಿಟಲ್ ಗ್ರಂಥಾಲಯ ಉದ್ಘಾಟಿಸಲಿದ್ದು, ಗ್ರಂಥಾಲಯದಲ್ಲಿ […]