ಶಿರೂರು ಮಠದ ನೂತನ ಉತ್ತರಾಧಿಕಾರಿಯ ಪಟ್ಟಾಭಿಷೇಕ ಮಹೋತ್ಸವದ ಪೂರ್ವಭಾವಿ ಕಾರ್ಯಕ್ರಮ
ಉಡುಪಿ: ಉಡುಪಿಯ ಅಷ್ಟಮಠಗಳಲ್ಲೊಂದಾದ ಶಿರೂರು ಮಠದ ನೂತನ ಉತ್ತರಾಧಿಕಾರಿಯ ಪಟ್ಟಾಭಿಷೇಕ ಮಹೋತ್ಸವ ಇದೇ ಮೇ 14ರಂದು ನಡೆಯಲಿದ್ದು, ಇದರ ಪೂರ್ವಭಾವಿಯಾಗಿ ದೇವತಾ ಪ್ರಾರ್ಥನೆ , ವಟುವಿಗೆ ಫಲ ಪ್ರದಾನ ಹಾಗೂ (ಗಣಪತಿ ಹೋಮ, ಬ್ರಹ್ಮಕೂರ್ಚ ಹೋಮ,ಪವಮಾನ ಪೂಯಮಾನ ಮಂಡಲ ಹೋಮ, ಧನ್ವಂತರಿ ಹೋಮ,ನವಗ್ರಹ ಹೋಮ,ತಿಲಹೋಮ) ಪ್ರಾಯಶ್ಚಿತ್ತ ಯಾಗಾದಿ ಕರ್ಮಾಂಗಗಳು ಸೋದೆ ವಾದಿರಾಜ ಮಠಾಧೀಶರಾದ ವಿಶ್ವವಲ್ಲಭತೀರ್ಥರ ಉಪಸ್ಥಿತಿಯಲ್ಲಿ ಶೀರೂರು ಮೂಲ ಮಠದಲ್ಲಿ ಇಂದು ನೆರವೇರಿತು. ಅವಧಾನಿ ಸುಬ್ರಹ್ಮಣ್ಯ ಭಟ್ಟ ಹಾಗೂ ವಿದ್ವಾನ್ ಗಿರಿರಾಜ ಉಪಾಧ್ಯಾಯರು ಧಾರ್ಮಿಕ ವಿಧಿ ವಿಧಾನಗಳನ್ನು […]