ಆಳ್ವಾಸ್ ಕಾಲೇಜಿನಲ್ಲಿ ‘ಮಾಯಾಚಕ್ರ’ ಕಿರುಚಿತ್ರದ ಪ್ರೀಮಿಯರ್ ಪ್ರದರ್ಶನ

ಮೂಡುಬಿದಿರೆ: ಆಳ್ವಾಸ್ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌರವ್ ಹೆಗ್ಡೆ ನಿರ್ದೇಶನದ ಕಿರುಚಿತ್ರ ‘ಮಾಯಾಚಕ್ರ’ದ ಪ್ರೀಮಿಯರ್ ಷೋ ಆಳ್ವಾಸ್ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಸಹಯೋಗದಲ್ಲಿ ಕಾಲೇಜಿನ ಆಡಿಯೋ ವೀಡಿಯೋ ಥಿಯೇಟರ್‌ನಲ್ಲಿ ನಡೆಯಿತು. ಕಿರುಚಿತ್ರ ವೀಕ್ಷಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಮ್ಯಾನೇಜ್ಮೆಂಟ್ ಟ್ರಸ್ಟಿ ವಿವೇಕ್ ಆಳ್ವ, ಗೌರವ್ ಹೆಗ್ಡೆ ಮತ್ತು ಅವರ ತಂಡದ ಚೊಚ್ಚಲ ಪ್ರಯತ್ನವನ್ನು ಶ್ಲಾಘಿಸಿದರು. ಎಳವೆಯಲ್ಲಿಯೇ ಇಂತಹ ಸೃಜನಾತ್ಮಕ ಕಾರ್ಯಗಳನ್ನು ಕೈಗೊಳ್ಳುವುದು ಸಮಾಜಕ್ಕೆ ಪ್ರೇರಣಾದಾಯಕ. ತನಿಖಾ ಪತ್ರಿಕೋದ್ಯಮದ ಕಥಾಹಂದರ ಹೊಂದಿರುವ ಈ ಕಿರುಚಿತ್ರವು, ಪತ್ರಕರ್ತರು […]