ಪ್ರಧಾನಿ ಮೋದಿ ಸ್ವಾಗತಕ್ಕೆ ಸಿದ್ಧತೆ ಪೂರ್ಣ- ಪುತ್ತಿಗೆ ಶ್ರೀ

ಉಡುಪಿ: ಉಡುಪಿ ಶ್ರೀಕೃಷ್ಣ ಮಠಕ್ಕೆ ಇದೇ 28ರಂದು ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಲಿದ್ದು, ಅವರನ್ನು ಸ್ವಾಗತಿಸಲು ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಪರ್ಯಾಯ ಪುತ್ತಿಗೆ ಮಠಾಧೀಶ ಸುಗುಣೇಂದ್ರ ತೀರ್ಥ ಸ್ವಾಮೀಜಿ ತಿಳಿಸಿದರು. ಗೀತಾಮಂದಿರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಮಧ್ಯಾಹ್ನ 12 ಗಂಟೆಗೆ ಪ್ರಧಾನಿಯವರು ಕೃಷ್ಣಮಠಕ್ಕೆ ಬರಲಿದ್ದು, ಮೊದಲು ಕನಕದಾಸರಿಗೆ ಪುಷ್ಪಾರ್ಚನೆ ಮಾಡುವರು ಬಳಿಕ ಕನಕನ ಕಿಂಡಿಗೆ ಹೊದಿಸಿರುವ ಚಿನ್ನದ ಕವಚ, ಸುವರ್ಣ ತೀರ್ಥ ಮಂಟಪವನ್ನು ಅನಾವರಣಗೊಳಿಸುವರು ಎಂದರು. ಪೂರ್ಣಕುಂಭ ಸ್ವಾಗತದೊಂದಿಗೆ ಪ್ರಧಾನಿಯವರನ್ನು ಬರಮಾಡಿಕೊಳ್ಳಲಿದ್ದು ಶ್ರೀಕೃಷ್ಣ […]