ಕೋವಿಡ್ ರೂಪಾಂತರಿ ವೈರಸ್ ಓಮಿಕ್ರಾನ್ ನಿಯಂತ್ರಣಕ್ಕೆ ಸನ್ನದ್ಧರಾಗಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮರಾವ್

ಉಡುಪಿ: ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಹೇಳಿದರು. ಅವರು ಬುಧವಾರ ಸಂಜೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ, ಜಿಲ್ಲೆಯಲ್ಲಿ ಓಮಿಕ್ರನ್ ವೈರಸ್ ನಿಯಂತ್ರಣ ಕುರಿತು ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಕುರಿತು ನಡೆದ ವರ್ಚುವಲ್ ಮೀಟಿಂಗ್‌ನ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಈಗಾಗಲೇ ವಿಶ್ವದ 11 ದೇಶಗಳಲ್ಲಿ ಹೊಸ ರೂಪಾಂತರಿ ತಳಿಯಾದ ಓಮಿಕ್ರಾನ್ […]